
ನವದೆಹಲಿ : ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗಿದ್ದು ಬಿ ಜೆ ಪಿ ರಾಜ್ಯಾಧ್ಯಕ್ಷರ ಪಟ್ಟ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರ ಪುತ್ರ ಶಾಸಕ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರಿಗೆ ನೀಡಲಾಗಿದೆ
ಈ ಕುರಿತಂತೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ದಾ ( ಜೆ ಪಿ ನಡ್ದಾ )ರವರು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಯಡಿಯೂರಪ್ಪ ರವರ ಹೆಸರನ್ನು ಘೋಷಿಸಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರ ರವಾನೆ ಮಾಡಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯನ್ನು ವಿಜಯೇಂದ್ರ ಯಡಿಯೂರಪ್ಪ ರವರ ನೇತೃತ್ವದಲ್ಲಿ ಬಿ ಜೆ ಪಿ ಎದುರಿಸಲು ಸಿದ್ದವಾಗಿದೆ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಯಡಿಯೂರಪ್ಪ ರವರ ನೇತೃತ್ವ ಲೋಕಸಭೆಯ ಚುನಾವಣೆಯಲ್ಲಿ ಮತ್ತೆ ಬಿ ಜೆ ಪಿ ಕಾಮಲ್ ಮಾಡುತ್ತಾ ಕಾದು ನೋಡಬೇಕಿದೆ