
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಕಾರ್ಮಿಕ ಇಲಾಖೆಯು ಬೆಂಗಳೂರು ನಗರ ಭಾಗದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು.
ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯವಾಗಿದೆ
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು