
ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಮನೆಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕಛೇರಿಪಾಳ್ಯದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ವೆಂಕಟೇಶ್(44) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಲಹಂಕದ ಲಕ್ಷ್ಮೀಪುರದಲ್ಲಿ ಮೃತರ ಹೆಂಡತಿ, ಮಕ್ಕಳು ವಾಸವಾಗಿದ್ದರು. ಮಗ್ಗದ ಕೆಲಸ ಮಾಡಿಕೊಂಡು ಕಛೇರಿಪಾಳ್ಯದಲ್ಲಿಯೇ ವೆಂಕಟೇಶ್ ಮನೆ ಕಟ್ಟುತ್ತಿದ್ದರು.
ಗುರುವಾರ ಬೆಳಿಗ್ಗೆಯಿಂದಲೇ ಕೈಯಲ್ಲಿ ವೈರ್ ಹಿಡಿದುಕೊಂಡು ಓಡಾಡುತ್ತಿದ್ದರು. ಮಧ್ಯಾಹ್ನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.