
ಬೆಂಗಳೂರು : ಬೆಂಗಳೂರು ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತಕರು khaarijjitas@bebble.com ಎಂಬ ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ಸೇರಿದಂತೆ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಯ ಬಳಿ ಬಂದಿದ್ದಾರೆ.
ಈ ಬಾಂಬ್ ಬೆದರಿಕೆ ಹಿನ್ನಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ರವರ ನೇತೃತ್ವದಲ್ಲಿ ಪ್ರತ್ಯೇಕ ಎರಡು ತಂಡಗಳ ರಚನೆಮಾಡಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ
ಪೊಲೀಸ್ ಆಯುಕ್ತ ಬಿ ದಯಾನಂದ್ ಮಾತನಾಡಿ. ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ ಈ ಹಿನ್ನಲೆ ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಲಾಗುತ್ತಿದೆ . ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ .