
ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 8 ರಿಂದ 12 ರ ವರೆಗೆ ಆಯೋಜನೆ ಮಾಡಲಾಗುತ್ತಿದ್ದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 11 ಮತ್ತು 12ರಂದು ಆಯೋಜನೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಆಚರಣೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ಆಚರಿಸಿದ್ದು 91 ನೇ ಅಧಿವೇಶನಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಡಿಸೆಂಬರ್ 8 ರಿಂದ 12 ರ ವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಡಿಸೆಂಬರ್ 8 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮಾಡಲಿದ್ದು ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ. ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಅಮೃತ ವರ್ಷಿಣಿ ಸಭಾಂಗಣದಲ್ಲಿ ಡಿಸೆಂಬರ್ 11 ರಂದು ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ನೆಡೆಯಲಿದೆ. ಡಿಸೆಂಬರ್ 12 ರಂದು ವಿದ್ವಾಂಸರು ಮತ್ತು ಪ್ರಖ್ಯಾತ ಗಮಕಿಗಳು ಆದ ಡಾ. ಎ ವಿ ಪ್ರಸನ್ನ ರವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನೆಡೆಯದೆ ಎಂದು ತಿಳಿಸಲಾಗಿದೆ.