
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು
ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಅಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ವಿ ಎಸ್ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ ಎಸ್ ರವಿಕುಮಾರ್ ಮಾತನಾಡಿ ನೂತನ ಜವಾಬ್ಧಾರಿ ಜೊತೆಗೆ ನಗರ ಭಾಗದ ಅಭಿವೃದ್ಧಿಗಾಗಿ ಶ್ರಮಿಸುವ ಅವಕಾಶ ಕಲ್ಪಿಸಲಾಗಿದೆ ನಗರದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮತ್ತು ಹಿರಿಯರ ಮಾರ್ಗದರ್ಶನದೊಂದಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು
ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ ಎಸ್ ರವಿ ಕುಮಾರ್ ರವರಿಗೆ ಶುಭವಾಗಲಿ. ಸ್ಥಳೀಯ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾರ್ಯ ನಿರ್ವಹಿಸಲಿದ್ದು ನಗರದ ಅಭಿವೃದ್ಧಿಗೆ ಆಧ್ಯತೆ ನೀಡಲಿದೆ .ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇಲ್ಲಿ ಕಾಣಬಹುದಾಗಿದೆ ಸರ್ವಸದಸ್ಯರು ಒಮ್ಮತದಿಂದ ರವಿ ಕುಮಾರ್ ರವರನ್ನು ಅವಿರೋಧವಾಗಿ ಅಯ್ಕೆ ಮಾಡಿದ್ದಾರೆ ಸರ್ವ ಸದಸ್ಯರ ನಂಬಿಕೆ ನಗರ ಸಭೆಯಿಂದ ಉತ್ತಮ ಕಾರ್ಯ ನೀಡುವಲ್ಲಿ ಸಹಕರವಾಗಲಿದೆ ಎಂದು ತಿಳಿಸಿದರು
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ರವಿಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಹೆಚ್. ಅಪ್ಪಯ್ಯಣ್ಣ, ಎ.ನರಸಿಂಹಯ್ಯ, ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಸದಸ್ಯರಾದ ಮಲ್ಲೇಶ್, ಆನಂದ್ ಮತ್ತಿತರರು ಅಭಿನಂದನೆ ಸಲ್ಲಿಸಿದರು.