
ದೊಡ್ಡಬಳ್ಳಾಪುರ : ತಾಲ್ಲೂಕಿನ ಮಹಿಳಾ ಸಮಾಜ ಕಸ್ತೂರ ಬಾ ಶಿಶುವಿಹಾರ (ರಿ) ದಲ್ಲಿ ನೆಡೆಯುವ ಕಾರ್ಯಕಾರಿ ಸಮಿತಿಯ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲಾ ವರ್ಗದ ಮಹಿಳೆಯರು ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸುವಂತೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ನಿರ್ದೇಶಕರಾದ ಪ್ರಮೀಳಾ ಮಹಾದೇವ್ ರವರು ಮಹಿಳಾ ಸಮಾಜದ ಅಧ್ಯಕ್ಷರಾದ ಎಂ ಕೆ ವತ್ಸಲಾ ರವರಿಗೆ ಮನವಿ ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರು ಹಾಗೂ ಮಹಿಳಾ ಸಮಾಜದ ಮಾಜಿ ನಿರ್ದೇಶಕರು ಆದ ಪ್ರಮೀಳಾ ಮಹಾದೇವ್ ರವರು ಮಾತನಾಡಿ ಸಾಮಾಜಿಕ ನ್ಯಾಯದ ಅಡಿ ಮಹಿಳಾ ಸಮಾಜದಲ್ಲಿ ಎಲ್ಲಾ ವರ್ಗದ ಮಹಿಳೆಯರಿಗೆ ಅವಕಾಶ ಕಲ್ಪಿಸಲು ಮನವಿ ಮಾಡಲಾಗಿದೆ ಹಾಗೂ ಸದ್ಯ ಇರುವ ಒಂಬತ್ತು ನಿರ್ದೇಶಕರ ಸ್ಥಾನಗಳನ್ನು ಹದಿಮೂರಕ್ಕೆ ವಿಸ್ತರಿಸುವ ಬಗ್ಗೆ ಕೋರಲಾಗಿದೆ ಎಂದು ತಿಳಿಸಿದರು