
ದೊಡ್ಡಬಳ್ಳಾಪುರ : ತಾಲ್ಲೂಕಿನ ಒಕ್ಕಲಿಗರ ಭವನದಲ್ಲಿ ಡಿಸೆಂಬರ್ 25 ರಂದು 2024 ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡುವ ಮೂಲಕ ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಿದೆ ಎಂದು ಗುರುವಾರ ನೆಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿತ್ತು
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮ ಜೆಡಿಎಸ್ ಪಕ್ಷವು ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಿದ್ದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ ಬೆಂಬಲಕ್ಕೆ ನಾವು ಸದಾ ಸಿದ್ಧರಿದ್ದೇವೆ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು
ಜೆಡಿಎಸ್ ಪಕ್ಷದ ಮುಖಂಡರಾದ ಅಪ್ಪಯ್ಯಣ್ಣ ಮಾತನಾಡಿ ತಾಲ್ಲೂಕಿನ ಜನತೆಗೆ ಹೊಸ ವರ್ಷದ ಅಂಗವಾಗಿ ಪಕ್ಷದ ವತಿಯಿಂದ ವಾರ್ಷಿಕ ದಿನಚರಿ ಬಿಡುಗಡೆ ಕಾರ್ಯಕ್ರಮವನ್ನು ಡಿಸೆಂಬರ್ 25 ರಂದು ಹಮ್ಮಿಕೊಳ್ಳಲಾಗಿದೆ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷವು ಸದೃಢವಾಗಿದೆ ನಮ್ಮ ನಿಷ್ಟಾವಂತ ಕಾರ್ಯಕರ್ತರು ನಮ್ಮೊಂದಿಗೆ ಸದಾ ಇದ್ದಾರೆ ನಮ್ಮಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ತ. ನಾ ಪ್ರಭುದೇವ್ , ಎ.ನರಸಿಂಹಯ್ಯ , ಆನಂದ್ , ಪ್ರವೀಣ್ ಶಾಂತಿನಗರ , ತಳವಾರ್ ನಾಗಣ್ಣ , ತೂಬಗೆರೆ ಅಂಬರೀಷ್ , ಮತ್ತಿತರರು ಉಪಸ್ಥಿತರಿದ್ದರು