
ಬೆಂಗಳೂರು : ರಾಜ್ಯ ಬಿಜೆಪಿಯ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಂ ಗೌಡ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ರಾಜ್ಯ ಕಾರ್ಯದರ್ಶಿಗಳನ್ನಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ್ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ,ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಖಜಾಂಚಿಯನ್ನಾಗಿ ಸುಬ್ಬನರಸಿಂಹ ಅವರನ್ನು ನೇಮಿಸಲಾಗಿದೆ. ಮಹಿಳಾಮೋರ್ಚಾ ರಾಜ್ಯಾಧ್ಯಕ್ಷೆಯನ್ನಾಗಿ ಸಿ.ಮಂಜುಳಾ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಎಸ್ಟಿ ಮೋರ್ಚಾ ಅಧ್ಯಕ್ಷರನ್ನಾಗಿ ಬಂಗಾರು ಹನುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷರನ್ನಾಗಿ ಎಸ್.ಮಂಜುನಾಥ್( ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರನ್ನಾಗಿ ರಘು ಕೌಟಿಲ್ಯ, ರೈತ ಮೋರ್ಚಾದ ಅಧ್ಯಕ್ಷರನ್ನಾಗಿ ಎ.ಎಸ್.ಪಾಟೀಲ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರನ್ನಾಗಿ ಅನೀಲ್ ಥಾಮಸ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕದ ನೂತನ ಅಧ್ಯಕ್ಷರಾದ ಧೀರಜ್ ಮುನಿರಾಜು ಮಾತನಾಡಿ ರಾಜ್ಯ ಬಿಜೆಪಿ ನನಗೆ ನೂತನ ಜವಾಬ್ಧಾರಿಯನ್ನು ವಹಿಸಿದೆ ನನ್ನ ಮೇಲೆ ಭರವಸೆ ಇಟ್ಟು ಈ ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರ ಹಾಗೂ ರಾಜ್ಯದ ವರಿಷ್ಟರಿಗೆ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ರವರಿಗೆ ಹಾಗೂ ವಿಪಕ್ಷ ನಾಯಕರಾದ ಆರ್. ಅಶೋಕ್ ರವರಿಗೆ ಅಭಾರಿಯಾಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಯುವ ಘಟಕ ಬಲಪಡಿಸುವುದೇ ನನ್ನ ಗುರಿಯಾಗಿದ್ದು ಮುಂದೆ ಪಕ್ಷ ಅಭಿವೃದ್ಧಿಗೆ ಮತ್ತಷ್ಟು ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದು ತಿಳಿಸಿದರು