
ದೊಡ್ಡಬಳ್ಳಾಪುರ :ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು
ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವೈಕುಂಠ ಏಕಾದಶಿ ಎಂದು ಆಚರಿಸಲಾಗುತ್ತದೆ ಈ ದಿನ ವೆಂಕಟೇಶ್ವರ ಅಥವಾ ಶ್ರೀ ರಂಗನಾಥ ಸ್ವಾಮಿಯ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ .ಈ ಧನುರ್ಮಾಸದಲ್ಲಿ ಶ್ರೀ ರಂಗಪಟ್ಟಣದ ಆದಿರಂಗ ಶಿವನಸಮುದ್ರದ ಮಧ್ಯರಂಗ ಹಾಗೂ ತಮಿಳು ನಾಡಿನ ಶ್ರೀ ರಂಗಂ ಎಂದೇ ಖ್ಯಾತಿ ಪಡೆದಿರುವ ಅಂತ್ಯರಂಗ ದೇವರುಗಳ ದರ್ಶನ ಪಡೆದರೆ ಮನುಷ್ಯನ ಪಾಪಗಳು ಕಳೆದು ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯೂ ಇದೆ ಅಂತೆಯ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಾಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಭಕ್ತ ಸಮೂಹ ಹರಿದು ಬರುತ್ತಿದ್ದು ಸ್ವಾಮಿಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ ಎಂದು ದೇವಾಲಯದ ಪ್ರಧಾನ ಅರ್ಚಕರಾದ ಪುರುಷೋತ್ತಮ್ ತಿಳಿಸಿದರು
ದೇವಸ್ಥಾನದಲ್ಲಿ ಪ್ರತಿ ಶನಿವಾರ ಮತ್ತು ಶ್ರವಣ ಶನಿವಾರಗಳಂದು ವಿಶೇಷ ಪೂಜೆ ನಡೆಸಲಾಗುತ್ತದೆ ಎಂದು ತಿಳಿಸಿದರು