
ಹೊಸಕೋಟೆ: ಹನುಮ ಜಯಂತಿ ಅಂಗವಾಗಿ ದೇವಾಲಯದಲ್ಲಿ ನೀಡಿದ ಪ್ರಸಾದ ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ನೂರಾರು ಜನ ಅಸ್ವಸ್ಥಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ವೆಂಕಟರಮಣಸ್ವಾಮಿ, ಊರುಬಾಗಿಲ ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿಯ ಅಂಗವಾಗಿ ಭಕ್ತರಿಗೆ ಪ್ರಸಾದ ವಿತರಿಸಲಾಗಿತ್ತು.
ಪುಳಿಯೊಗರೆ, ಪಾಯಸ , ಲಡ್ಡು ಸೇವನೆ ಮಾಡಿದ್ದ ಭಕ್ತರಿಗೆ ವಾಂತಿ ಭೇದಿ ಕಾಣಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ನಗರದ ಖಾಸಗಿ ಆಸ್ಪತ್ರೆ, ಕೋಲಾರ, ಬೆಂಗಳೂರು ಆಸ್ಪತ್ರೆಗಳಲ್ಲಿ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಯಿತು.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾವೇರಿ ನಗರದ ಸಿದ್ದಗಂಗಮ್ಮ(45) ಎಂಬುವರು ಬುಧವಾರ ಮೃತಪಟ್ಟಿದ್ದಾರೆ. ಇದೇ ಆಸ್ಪತ್ರೆಯಲ್ಲಿ 15 ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.
ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಭರ್ತಿಯಗಿವೆ. ಆಸ್ಪತ್ರೆಗಳಲ್ಲಿ ಅಸ್ವಸ್ಥಗೊಂಡವರ ನರಳಾಟ ಕೇಳ ತೀರದಾಗಿದೆ.