
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ವಲಯದ ಇಸ್ಲಾಪುರ ಕಾರ್ಯಕ್ಷೇತ್ರದಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ನಡೆಯಿತು
ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ ಅತ್ಯಂತ ಅವಶ್ಯಕವಾಗಿದ್ದು ಮಹಿಳಾ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಸಹಕಾರ ನೀಡಿ ಸ್ಪಂದಿಸುತ್ತದೆ ಎಂದು ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಭಾಸ್ಕರ್ ನಾಯ್ಕ್ ತಿಳಿಸಿದರು
ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿಮಾತನಾಡಿದ ಅವರು ಸ್ವ ಉದ್ಯೋಗ ಕೈಗೊಳ್ಳುವುದರಿಂದ ಮನೆಯಲ್ಲಿ ಕುಳಿತು ಉದ್ಯೋಗ ಮಾಡುವುದರಿಂದ ಕುಟುಂಬದ ಆರ್ಥಿಕ ಸಮಸ್ಯೆ ಬಗೆಹರಿಯುತ್ತದೆ ನಾವು ಮಾಡುವುದರ ಜೊತೆಗೆ ಮತ್ತಷ್ಟು ಜನರಿಗೆ ಉದ್ಯೋಗ ಸೃಷ್ಠಿ ಮಾಡಬಹುದಾಗಿದೆ ಮತ್ತು ಪ್ರಸ್ತುತ ಉತ್ತಮ ಮಾರುಕಟ್ಟೆ ವ್ಯವಸ್ಥೆ ಇರುವುದರಿಂದ ಸದಸ್ಯರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ವ್ಯಕ್ತಿಗಳಾದ ಗೋವಿಂದ ರಾಜು ಮಾತನಾಡಿ ಮೇಣದ ಬತ್ತಿ ತಯಾರಿಕೆ ,ಅಗರಬತ್ತಿ ತಯಾರಿ ಹಾಗೂ ಮಾರುಕಟ್ಟೆ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಸ್ವ ಉದ್ಯೋಗಕ್ಕೆ ಬ್ಯಾಂಕುಗಳ ಸಹಕಾರ ಬಗ್ಗೆ ವಿವರ ನೀಡಿದರು
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶಶಿಕಲಾ ಕೃಷಿ ಮೇಲ್ವಿಚಾರಕರಾದ ಲೋಹಿತ್,ಸಿ ಎಸ್ ಸಿ ನೋಡಲ್ ರೇಣುಕಾ ಪ್ರಸಾದ್,ಗ್ರೀನ್ ವೇ ಸಂಸ್ಥೆಯ ಕಾರ್ತಿಕ್,ಸೋಲಾರ್ ಸಂಸ್ಥೆಯ ರಮೇಶ್,ಸೇವಾಪ್ರತಿನಿಧಿ ಹಾಗೂ ಸದಸ್ಯರು ಹಾಜರಿದ್ದರು