
ದೊಡ್ಡಬಳ್ಳಾಪುರ :ಕನ್ನಡಿಗರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ ನಮ್ಮ ನಾಯಕರಾದ ನಾರಾಯಣ ಗೌಡ ರವರನ್ನು ಈ ಕೂಡಲೇ ಬಿಡುಗಡೆಗೊಳಿಸಿ ಇಲ್ಲವಾದಲ್ಲಿ ನಮ್ಮ ಕರವೇ ಕಾರ್ಯಕರ್ತರು ಬೆತ್ತಲೆ ಮೆರವಣಿಗೆ ನಡೆಸುತ್ತಿವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು
ಇದು ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲ್ಲೂಕು ಕಛೇರಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ ದ ವತಿಯಿಂದ ತಾಲ್ಲೂಕು ಅಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ಸಂದರ್ಭದಲ್ಲಿ ಪುರುಷೋತ್ತಮ್ ಗೌಡ ಮಾತನಾಡಿ ನಾವು ಕನ್ನಡಿಗರು ನಮ್ಮ ಭಾಷೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ ಸರ್ಕಾರವೇ ಹೇಳಿರುವಂತೆ ಶೇಕಡಾ 60 ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆ ಮಾಡಬೇಕು ಎಂಬುದು ನಮ್ಮ ಒತ್ತಾಯ. ಡಿಸೆಂಬರ್ 27ರಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಯಣ ಗೌಡರನ್ನು ಬಂಧಿಸಲಾಗಿದ್ದು ಕನ್ನಡಿಗರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ ನಮ್ಮ ನಾಯಕರನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕು ಇಲ್ಲವಾದಲ್ಲಿ ದೊಡ್ಡಬಳ್ಳಾಪುರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸರ್ಕಾರಕ್ಕೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಬೆತ್ತಲೆ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದರು
ಇಂದಿನ ಹೋರಾಟ ಸಾಂಕೇತಿಕವಾಗಿ ನಡೆಸಿದ್ದು ಈ ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು , ನಮ್ಮ ಕನ್ನಡ ಹೋರಾಟಗಾರರು ಪ್ರಾಣ ತ್ಯಾಗಕ್ಕೂ ಸಿದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಕನ್ನಡ ಪರ ಹೋರಾಟಗಾರರ ಬಗ್ಗೆ ಬೇಜವಾಬ್ದಾರಿ ಅಸಡ್ಡೆ ವರ್ತನೆ ಬದಲಾಗಬೇಕಿದೆ ಇಲ್ಲವಾದಲ್ಲಿ ಮುಂದೆ ಇದರ ಪ್ರತಿಫಲವಾಗಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ಯಶಸ್ವಿಗೊಳಿಸಿದರು