
ದೊಡ್ಡಬಳ್ಳಾಪುರ : ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ಜೀವನ ನೆಡೆಸಲು ಇಂತಹ ಕಾರ್ಯಗಾರಗಳು ಸಹಾಯ ಮಾಡಲಿವೆ. ಕಾರ್ಯಕ್ರಮದ ಮುಖ್ಯ ಉದ್ದೇಶವೇ ಮಹಿಳಾ ಸಬಲೀಕರಣ ಎಂದು ಜಿಲ್ಲಾ ನಿರ್ದೇಶಕರಾದ ಉಮರಬ್ಬ ತಿಳಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ( ಚಿಕ್ಕ ಮಧುರೆ) ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜನೆ ಮಾಡಲಾಗಿದ್ದ ತಾಲ್ಲೂಕು ಮಟ್ಟದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕಿನ ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಸ್ವ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಈ ಕಾರ್ಯಕ್ರಮವು ಸಹಾಯಕಾರಿಯಾಗಿದೆ ಈ ಕಾರ್ಯಕ್ರಮದಿಂದ ಮಹಿಳೆಯರಿಗೆ ಮತ್ತಷ್ಟು ನೂತನ ಉದ್ಯೋಗ ಪ್ರಾರಂಭಿಸಲು ಉತ್ತೇಜನ ಸಿಗಲಿದೆ ಎಂದು ತಿಳಿಸಿದರು
ಕನಸವಾಡಿ ಶನಿಮಹಾತ್ಮ ದೇವಾಲಯದ ಧರ್ಮದರ್ಶಿಗಳಾದ ಶ್ರೀ ಸತ್ಯನಾರಾಯಣ ರವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ವಕೀಲರಾದ ಸ್ಮಿತಾ ಕುಮಾರ್ ಮಾತನಾಡಿ ಸಮಾಜದಲ್ಲಿ ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ನೀಡಬೇಕೆಂದು ಕೋಟ್ ಆದೇಶ ಮಾಡಿದ್ದರು ಇಂದಿಗೂ ಸಮಾಜದಲ್ಲಿ ಹಲವು ಮಹಿಳೆಯರು ತಮ್ಮ ಕುಟುಂಬಗಳಿಂದ ಆರ್ಥಿಕ ನೆರವು ಸಿಗದೆ ಪರದಾಡುತ್ತಿದ್ದಾರೆ ಹೆಣ್ಣು ಮಕ್ಕಳ ಕೌಟುಂಬಿಕ ಸಮಸ್ಯೆಗಳಿಗೆ ಉಚಿತ ಕಾನೂನೂ ನೆರವು ಸಿಗಬೇಕಿದೆ ಎಂದರು ಹಾಗೂ ಚೆಕ್ ಬೌನ್ಸ್,ಬ್ಯಾಂಕ್ ಮತ್ತು ಆರ್ಥಿಕ ವ್ಯವಹಾರಗಳಲ್ಲಿ ನೋಟರಿ ಬಾಂಡ್ ಮತ್ತಿತರ ಭದ್ರತೆಗಳನ್ನು ಕುರಿತು ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಡಾಕ್ಟರ್ ಕಾಮೇಶ್ವರಿ ಮಾತನಾಡಿ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮುಖ್ಯವಾಗಿ ತಮ್ಮ ಆರೋಗ್ಯ ಸಮಸ್ಯೆಗಳನ್ನು ಮುಕ್ತವಾಗಿ ಡಾಕ್ಟರ್ ಗಳೊಂದಿಗೆ ಹಂಚಿಕೊಳ್ಳಬೇಕು ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹಲವು ಗುಪ್ತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಇತರರೊಂದಿಗೆ ಹಚ್ಚಿಕೊಳ್ಳಲು ಮುಜುಗರಕ್ಕೆ ಒಳಗಾಗುತ್ತಿದ್ದಾರೆ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುವ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಗಳ ಬಗ್ಗೆ ಎಚ್ಚರ ವಹಿಸಬೇಕು ಎಂದರು ಹಾಗೂ ಈ ಸಂದರ್ಭದಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ನ ಗುಣಲಕ್ಷಣಗಳು ಹಾಗೂ ಚಿಕಿತ್ಸಾ ವಿಧಾನ ಕುರಿತು ಸಂಪೂರ್ಣ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾಭಾಸ್ಕರ್ ನಾಯ್ಕ್ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ,ಮೇಲ್ವಿಚಾರಕರಾದ ದೀಪಕ್, ಮೇಲ್ವಿಚಾರಕರಾದ ಶ್ರೀಮತಿ ವೈಷ್ಣವಿ ರೆಡ್ಡಿ ,ಶ್ರೀಮತಿ ಛಾಯ ಒಕ್ಕೂಟದ ಅಧ್ಯಕ್ಷರು ,ಸೇವಾಪ್ರತಿನಿಧಿಗಳು , ವಿ.ಎಲ್.ಈ ಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು