
ದೊಡ್ಡಬಳ್ಳಾಪುರ(ತೂಬಗೆರೆ)ಜ. 9: ದ್ವಿತೀಯ ಪಿಯು ವಿದ್ಯಾರ್ಥಿಗಳು ಬಯಪಡುವ ಅಗತ್ಯವಿಲ್ಲ, ಇದು ವಿದ್ಯಾರ್ಥಿಗಳಿಗೆ ಮಹತ್ತರವಾದ ಘಟ್ಟ. ಮಾನಸಿಕದಿಂದ ಹೊರಬಂದು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು ವಿದ್ಯಾರ್ಥಿಗಳಿಗೆ ಸಮಯ ಶ್ರದ್ದೆ, ಸಹನೆ ಅತಿಮುಖ್ಯವಾಗಿದ್ದು, ನಿರಂತರ ಅಬ್ಯಾಸದಿಂದ ಮುಂದೆ ಬರಲು ಸಾದ್ಯವೆಂದು ದೊಡ್ಡಬಳ್ಳಾಪುರ ಸರ್ಕಾರಿ ಪದವಿ ಕಾಲೇಜು ಸ್ನಾತಕೋತ್ತರ ಕೇಂದ್ರದ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊಫೆಸರ್ ಸತೀಶ್ ಅಭಿಪ್ರಾಯ ಪಟ್ಟರು.
ಅವರು ತೂಬಗೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮುಂದಿನ ಉಜ್ವಲ ಬವಿಷ್ಯಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಷ್ಟ ಪಟ್ಟು ಅಬ್ಯಾಸ ಮಾಡಿ ಹೆಚ್ಚಿನ ಅಂಕಗಳೊಂದಿಗೆ ಪಾಸಾದಾಗ ಮಾತ್ರ ಒಳ್ಳೆಯ ವಿದ್ಯಾಲಯಗಳಲ್ಲಿ ಸರಳವಾಗಿ ಪ್ರವೇಶ ದೊರೆಯುತ್ತದೆ. ತಮ್ಮಲ್ಲಿ ಆಗಾಧವಾದ ಶಕ್ತಿ ಇದೆ. ದೃಡ ಸಂಕಲ್ಪದಿಂದ ಓದಿ ನಿವು ಕಲಿಸಿದ ಗುರುಗಳಿಗೆ ಇಲಾಖೆಗೆ ತಂದೆ ತಾಯಿಗಳಿಗೆ ಹೆಸರು ತರಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ ಮಾತನಾಡಿ ಮಕ್ಕಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಾಠವೂ ಎಷ್ಟು ಮುಖ್ಯವೋ ಅದರಂತೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಚರ್ಚಾಸ್ಪರ್ಧೆ,ಪ್ರವಾಸ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿರಬೇಕು ಇದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದರು. ಕಾಲೇಜಿನಲ್ಲಿ ಅಯೋಜಿಸುವಂತ ಅನೇಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಪ್ರಾಂಶುಪಾಲರಾದ ಉಷಾ ವಿ ವಹಿಸಿದರು. ಇತಿಹಾಸ ಉಪನ್ಯಾಸಕಿ ಸರಸ್ವತಿ ನಿರೂಪಿಸಿದರು, ಗಣಿತ ಉಪನ್ಯಾಸಕಿ ಪುಷ್ಪಾವತಿ ವಾರ್ಷಿಕ ವರದಿ ಮಂಡಿಸಿದರು.
ಕಾರ್ಯಕ್ರಮ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ, ಕೆಪಿಸಿಸಿ ಸದಸ್ಯರಾದ ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮುನಿಕೃಷ್ಣಪ್ಪ, ಯುವ ಮುಖಂಡ ಉದಯ ಆರಾಧ್ಯ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತ್ಯನಾರಾಯಣಪ್ಪ, ವೆಂಕಟೇಶ್, ಮುಖಂಡರಾದ ರವಿಸಿದ್ದಪ್ಪ, ಅಂಬರೀಶ್, ವೆಂಕಟಪ್ಪ, ದೇವೇಂದ್ರ ಸ್ವಾಮಿ ರಾಜಗೋಪಾಲ್ ಹಾಗೂ ಗ್ರಾಮಸ್ಥರು ಹಾಜರಿದ್ದರು.