
ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದ ಬಳಿ ಪೆಟ್ರೋಲ್ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಇಂದು ಮಧ್ಯಾಹ್ನ ಈ ಅಪಘಾತ ನಡೆದಿದೆ, ಘಟನೆಯಲ್ಲಿ ಕೆಳಗಿನಜೂಗನಹಳ್ಳಿ ಗ್ರಾಮದ ಹನುಮಂತಯ್ಯ ಎಂಬುವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪರಾಗಿದ್ದಾರೆ
ಗಾಯಗೊಂಡ ಹನುಮಂತಯ್ಯರನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಬೈಕ್ ಸಂಪೂರ್ಣವಾಗಿ ಹಾಳಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪೆಟ್ರೋಲ್ ಟ್ಯಾಂಕರ್ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.