
ದೊಡ್ಡಬಳ್ಳಾಪುರ : ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ . ಸಮಾಜದಲ್ಲಿ ಹೆಣ್ಣು ನಿರ್ಭೀತಿಯಿಂದ ಜೀವಿಸುವ ವಾತಾವರಣದ ನಿರ್ಮಾಣವಾಗಬೇಕಿದೆ ನಮ್ಮ ಬಳಿಗೆ ಬರುವ ಸಾರ್ವಜನಿಕರಿಗೆ ಹೆಣ್ಣು ಮಕ್ಕಳ ಬಗ್ಗೆ ಅರಿವು ಮೂಡಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ರಮೇಶ್ ತಿಳಿಸಿದರು
ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಸ್ಪತ್ರೆಯ ಸಿಬ್ಬಂದಿ” ಬೇಟಿ ಬಚಾವೋ ಬೇಟಿ ಪಡಾವೋ ” ಎಂಬ ಧ್ಯೇಯ ವಾಕ್ಯದೊಂದಿಗೆ 2024ರ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆಯನ್ನು ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ ಹಾಗೂ ಕೈ ಬರವಣಿಗೆಯಲ್ಲಿ ಬರೆದ ಗಿಫ್ಟ್ ಕಾರ್ಡುಗಳನ್ನು ಹೆಣ್ಣು ಮಕ್ಕಳ ತಾಯಂದಿರಿಗೆ ನೀಡುವ ಮೂಲಕ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಂತಸದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೆಣ್ಣು ಮಕ್ಕಳ ರಕ್ಷಣೆಗೆ ವೈದ್ಯಕೀಯ ಇಲಾಖೆ ಸದಾ ಸಿದ್ಧವಿದ್ದು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು ಹಲವಾರು ಯೋಜನೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರೂಪಿಸಿದೆ. ಇಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಿಬ್ಬಂದಿಗಳ ಸಹಾಯದಿಂದ ಅರ್ಥಪೂರ್ಣವಾಗಿ ಆಚರಿಸಿದ್ದೇವೆ ಇದು ಕೇವಲ ಆಚರಣೆ ಎಲ್ಲ ನಮ್ಮ ಜವಾಬ್ದಾರಿ . ಸಮಾಜದಲ್ಲಿ ಹೆಣ್ಣು ಮಕ್ಕಳು ಬೇಡವೆಂಬ ಭಾವನೆ ಹೋಗಿ ಹೆಣ್ಣು ಮಕ್ಕಳೇ ಬೇಕು ಎಂಬ ಭಾವನೆ ಬರಬೇಕಿದೆ. ಹೆಣ್ಣು ಬ್ರೂಣಹತ್ಯೆ ಸಂಪೂರ್ಣವಾಗಿ ನಿಲ್ಲಬೇಕಿದೆ. ಹೆಣ್ಣು ಬ್ರೂಣ ಹತ್ಯೆ ಮಾಡುವವರ ವಿರುದ್ಧ ಕಾನೂನು ಕ್ರಮ ಮತ್ತಷ್ಟು ಬಿಗಿ ಆಗಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು
ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆಯ ಅಂಗವಾಗಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಇಂದು ಸಂಜೆ ವಿಶೇಷ ದೀಪಲಂಕಾರದಿಂದ ಕಂಗೊಳಿಸಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ.ಸವಿತಾ ,ಡಾ. ರಾಜು ,ಡಾ. ಮಂಜುನಾಥ್, ಡಾ.ಹರಿಣಿ, ಶುಶ್ರೂಷಕರಾದ ಅಲೀಮಾ,ಒಂಕರಮ್ಮ, ರಾಧಾ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು