
ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ.ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಜಯಗಳಿಸುವ ವಿಶ್ವಾಸವಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯಲಹಂಕದಲ್ಲಿ ಮಾತ್ರ ಬಿಜೆಪಿ ಜಯಗಳಿಸಿತ್ತು. ಅಂತಹ ಕಠಿಣ ಪರಿಸ್ಥಿತಿಯಲ್ಲೂ ಬಹುದೊಡ್ಡ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಪಕ್ಷಾತೀತವಾಗಿ ನಮಗೆ ಕ್ಷೇತ್ರದ ಜನತೆ ಬೆಂಬಲ ಸೂಚಿಸುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿ ಪಟ್ಟಿಯಲ್ಲಿ ಜೆಡಿಎಸ್ ಪಕ್ಷದ ನಾಯಕರು ಇದ್ದು ಯಾರಿಗೆ ಟಿಕೆಟ್ ಸಿಕ್ಕರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿಯಾಗಿದೆ. ಸ್ಥಳೀಯ ಮಟ್ಟದಲ್ಲಿಯೂ ಜೆಡಿಎಸ್ ನಾಯಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಚ್ ಹನುಮಂತರಾಯಪ್ಪ ಮಾತನಾಡಿ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಪಕ್ಷದ ಸೂಚಿಸಿದವರಿಗೆ ನಾವು ಕೆಲಸ ಮಾಡುತ್ತೇವೆ. ಅಲೋಕ್ ವಿಶ್ವನಾಥ್ ಸಜ್ಜನ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ನವರು ನಮಗೆ ಮೊದಲಿನಿಂದಲೂ ವಿರೋಧಿಗಳಲ್ಲ. ಉತ್ತಮ ಸ್ನೇಹ ಭಾಂದವ್ಯ ಹೊಂದಿದ್ದೇವೆ ಹೀಗಾಗಿ ಗೊಂದಲಗಳಿಲ್ಲದೆ ಚುನಾವಣೆ ಎದುರಿಸುತ್ತೇವೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮುಖಂಡರಾದ ದಿಬ್ಬೂರು ಜಯಣ್ಣ, ಎನ್.ಕೆ ರಮೇಶ್, ರಂಗರಾಜು, ವೆಂಕಟರಾಜು, ನವನೀತ್, ಮಧು, ಅರ್ಜುನ್ ಮತ್ತಿತ್ತರರು ಇದ್ದರು.