
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ(ನಿ)ದ ವತಿಯಿಂದ “ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”ವನ್ನು ಫೆಬ್ರವರಿ 26 ಹಾಗೂ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಈ ಉದ್ಯೋಗ ಮೇಳದಲ್ಲಿ 500ಕ್ಕಿಂತ ಹೆಚ್ಚು ಖಾಸಗಿ ಉದ್ಯೋಗದಾತರು(ಕಂಪನಿಗಳು) ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲ್ಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿಂಗ್ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು https://skillconnect.kaushalkar.com ವೆಬ್ಸೈಟ್ ನಲ್ಲಿ ನೊಂದಾಯಿಸಿ.
ಅಭ್ಯರ್ಥಿಗಳು ಸ್ವವಿವರ(ಬಯೋಡಾಟ) ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.