
ಇಂದು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಮಧ್ಯಾಹ್ನ 12 ಗಂಟೆಗೆ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದ್ದು ರಥೋತ್ಸವದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನಾಳೆ ಫೆಬ್ರವರಿ 25ರಂದು ಹಗಲು ಪರಿಷೆ ನೆಡೆಯಲಿದೆ.
ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಜಾತ್ರಾ ಸಂಸ್ಕೃತಿಕ ಸಮಿತಿ ವತಿಯಿಂದ ನಗರಸಭೆ ಹಾಗೂ ತಾಲ್ಲೂಕು ಕಲಾವಿದರ ಸಂಘ, ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ಬ್ರಹ್ಮರಥೋತ್ಸವದ ಅಂಗವಾಗಿ ಫೆಬ್ರವರಿ 24 ಮತ್ತು 25 ರಂದು ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
ಇಂದು ಸಂಜೆ 6 ಗಂಟೆಗೆ ಶ್ರೀ ಲಕ್ಷ್ಮಿ ಲಲಿತ ನಾಟ್ಯ ಕಲಾಸಂಘದಿಂದ ಭರತನಾಟ್ಯ ಕಾರ್ಯಕ್ರಮ ಹಾಗೂ ರಾತ್ರಿ 9 ಗಂಟೆಗೆ ಶ್ರೀ ಆಂಜನೇಯ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಶ್ರೀಕೃಷ್ಣಗಾರುಡಿ ಪೌರಾಣಿಕ ನಾಟಕ ಪ್ರದರ್ಶನ ನೆಡೆಯಲಿದೆ.
ನಾಳೆ ಫೆಬ್ರವರಿ 25ರಂದು ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ರಾತ್ರಿ 9:00ಗೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದಿಂದ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನ ನೆಡೆಯಲಿದೆ.