
ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ ಅಂಗೀಕರಣದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ನಮ್ಮ ಪಂಚಾಯಿತಿ ವತಿಯಿಂದ ಗ್ರಾಮಸ್ಥರು ಭಾಗವಸುತ್ತಿರುವುದು ನಮ್ಮ ಪುಣ್ಯವೇ ಸರಿ. ಕಾರ್ಯಕ್ರಮಕ್ಕೆ ಸ್ವಇಚ್ಛೆಯಿಂದ ಸಾರ್ವಜನಿಕರು ತಾವಾಗಿಯೇ ಮುಂದೆ ಬರುತ್ತಿರುವುದು ಮತಷ್ಟು ಖುಷಿ ತಂದಿದೆ ಎಂದು ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಹನುಮಯ್ಯ ತಿಳಿಸಿದರು
ಭಾರತ ಸಂವಿಧಾನ ಅಂಗೀಕರಣದ 75ನೇ ವರ್ಷದ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.25 ರಂದು ರಾಜ್ಯ ಸರ್ಕಾರವು ‘ಸಂವಿಧಾನ ಜಾಗೃತಿ ಸಮಾವೇಶ’ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲೂ ಸಕ್ಕರೆ ಗೊಲ್ಲಹಳ್ಳಿ ಗ್ರಾಮದಿಂದ ಹೋರಾಟ ಬಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇದ್ದು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿದ್ದು ಎಲ್ಲರಲ್ಲೂ ಸಂತಸ ಮನೆ ಮಾಡಿದೆ ಎಂದು ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾದ ಹನುಮಂತಯ್ಯ ಮಾತನಾಡಿ ಸರ್ಕಾರದ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ. ನಮ್ಮ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಲ್ಲಾ ಪದಾಧಿಕಾರಿಗಳು ಈ ಅದ್ಭುತ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿರುವ ಸಂವಿಧಾನಕ್ಕೆ 75 ವರ್ಷಗಳು ಕಳೆದಿವೆ. ಇಂದಿಗೂ ಪ್ರತಿಯೊಬ್ಬ ಭಾರತೀಯನು ಹೆಮ್ಮೆಯಿಂದ ತನ್ನ ಹಕ್ಕನ್ನು ಪ್ರತಿಪಾದಿಸಲು ಸಾಧ್ಯವಾಗುತ್ತಿರುವುದು ಕೇವಲ ಸಂವಿಧಾನದಿಂದ ಮಾತ್ರ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಕ್ಕರೆ ಗೊಲ್ಲಹಳ್ಳಿ ಪಂಚಾಯಿತಿ ಸದಸ್ಯರಾದ ಗೀತಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮುನಿರಾಜು ,ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಖಜಾಂಜಿ ಆನಂದ್, ಸಕ್ಕರೆ ಗೊಲ್ಲಹಳ್ಳಿ ಪಂಚಾಯಿತಿಯ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು