
ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
ಈ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.
ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ
ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು. ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೇವನಹಳ್ಳಿ- ಮೊ. 9480461234. ಎಂ.ಎಸ್.ದೀಪಾ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೊಡ್ಡಬಳ್ಳಾಪುರ. ಮೊ. 9880210892. ರೇಖಾ ಬಿ.ಪಿ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹೊಸಕೋಟೆ- ಮೊ. 8217210320. ಹರೀಶ್. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ-ಮೊ. 9880461607 ಗೆ ಸಂಪರ್ಕಿಸಬಹುದು ಎಂದು
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.