
ಸಂವಿಧಾನ ತಿದ್ದುಪಡಿ ಕುರಿತು ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನವನ್ನು ತಿದ್ದುಪಡಿ ಮಾಡಲು ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಲೇ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದು ಅವರ ಹೇಳಿಕೆ ಸಂವಿಧಾನದಕ್ಕೆ ಮಾಡಿದ ಅಪಮಾನ ಹಾಗೂ ಅಕ್ಷಮ್ಯ ಅಪರಾಧವಾಗಿದೆ,ಕಾಂಗ್ರೆಸ್ ಪಕ್ಷವು ಇಂತಹ ಸಂವಿಧಾನ ವಿರೋಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ, ಈ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ರಾಜ್ಯದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು. ಸಂವಿಧಾನದ ಅಡಿಯಲ್ಲಿ ಅಧಿಕಾರ ಸ್ವೀಕರಿಸಿ ಅನುಭವಿಸುತ್ತಿರುವ ಅನಂತಕುಮಾರ್ ಹೆಗ್ಗಡೆಯವರು ಸಂವಿಧಾನವನ್ನು ಬದಲಿಸುವ ಮಾತನ್ನು ಆಡಿರುವುದು ಸರಿಯಲ್ಲ,ಪದೇ ಪದೇ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಗೊಂದಲದ ವಾತವರಣ ಸೃಷ್ಟಿ ಮಾಡುವುದು ಅವರ ಉದ್ದೇಶ ಎಂದು ಆರೋಪಿಸಿದರು.
ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿರುವ ಸಂಸದರ ಬಗ್ಗೆ ರಾಷ್ಟ್ರ ಹಾಗೂ ರಾಜ್ಯ ಬಿಜೆಪಿ ಪಕ್ಷದ ನಾಯಕರು ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದು ಖಂಡನೀಯ.
ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಇನ್ನು 8 ದಿನಗಳೊಳಗಾಗಿ ಪಕ್ಷದಿಂದ ಉಚ್ಚಾಟನೆ ಮಾಡದಿದ್ದರೆ.. ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
*ಜನರ ಗಮನ ಸೆಳೆಯಲು ಸಿಎಎ ಜಾರಿ*
ಸುಪ್ರೀಂ ಕೋರ್ಟ್ ಗೆ ಎಸ್ಬಿಐ ಸಲ್ಲಿಸಿರುವ ಚುನಾವಣೆ ಬಾಂಡ್ ಬಹಿರಂಗ ಮಾಡಿದರೆ ಬಿಜೆಪಿಗೆ ಭಾರೀ ಮುಖಭಂಗ ಆಗುತ್ತದೆ. ಹೀಗಾಗಿ ಬಿಜೆಪಿ ಪಕ್ಷವು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಿಎಎ ಜಾರಿ ಮಾಡಿದೆ ಎಂದರು..
ಈ ವೇಳೆ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಉಪಸ್ಥಿತರಿದ್ದರು.