
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ 25 ( ವಿಜಯಮಿತ್ರ ) : ದೇವನಹಳ್ಳಿ ತಾಲ್ಲೂಕಿನಲ್ಲಿ ಜಾಲಿಗೆ ಗ್ರಾಮದಲ್ಲಿ *ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಸಂಜೀವ್ ಖಾನ್ಹ ನ್ಯಾಯಮೂರ್ತಿಗಳು, ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ರವರು* ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ನೂತನ ಕಾನೂನು ಸಲಹಾ ಕೇಂದ್ರಕ್ಕೆ ಚಾಲನೆ ನೀಡಿದರು. ನಂತರ ಉಚಿತ ಕಾನೂನು ನೆರವು ಬಗ್ಗೆ ಗ್ರಾಮಸ್ಥರಿಗೆ ಕಾನೂನು ಜಾಗೃತಿ ಮೂಡಿಸಿ, ರಾಷ್ಟ್ರೀಯ ಕಾನೂನು ಸೇವೆ ಬಗ್ಗೆ ಜನರ ಜೊತೆಗೆ ಮುಕ್ತವಾಗಿ ಸಮಾಲೋಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ. ಎನ್, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ, ಉಪವಿಭಾಗಾಧಿಕಾರಿ ಎ.ಸಿ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ , ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜಾಲಿಗೆ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.