
ದೊಡ್ಡಬಳ್ಳಾಪುರ ಏಪ್ರಿಲ್ 01(ವಿಜಯಮಿತ್ರ ): ರಾಜ್ಯದ ಪ್ರತಿ ಹಳ್ಳಿಗಳಲ್ಲೂ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಜೊತೆ ಜೊತೆಯಾಗಿ ಸಾಗುತ್ತಿತ್ತು.ಪಕ್ಷತೀತವಾಗಿ ಶ್ರಮಿಸುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಜೀ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಉತ್ಸುಕರಾಗಿದ್ದು. ಎರಡು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕಾರ್ಯಕ್ಕೆ ಎರಡು ಪಕ್ಷದ ನಾಯಕರು ಮುಂದಾಗಿದ್ದೇವೆ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ತಿಳಿಸಿದರು.
ತಾಲ್ಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮತ್ತು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ.
*ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೂ ಎಚ್ ಡಿ ಕುಮಾರಸ್ವಾಮಿ ಕುಟುಂಬಕ್ಕೂ ಅವಿನಾಭಾವ ಸಂಬಂಧ*
2019 ರಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರ ಸ್ವಾಮಿ ರವರು ಚಿಕ್ಕಬಳ್ಳಾಪುರ ಮತ್ತು ರಾಮನಗರ ವನ್ನು ಜಿಲ್ಲೆಗಳನ್ನಾಗಿ ಘೋಷಣೆಮಾಡಿದ್ದರು. ಇಂದಿಗೂ ಚಿಕ್ಕಬಳ್ಳಾಪುರ ಕ್ಷೇತ್ರ ಹಾಗೂ ವಿಶೇಷವಾಗಿ ದೊಡ್ಡಬಳ್ಳಾಪುರ ಗ್ರಾಮಗಳಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರ ಸ್ವಾಮಿಯವರ ಅಭಿಮಾನಿಗಳಿದ್ದು. ಎನ್ ಡಿ ಎ ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರಿಗೆ ಈ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಕರಿಯಾಗಲಿದೆ ಎಂದರು
*ಬಚ್ಚೆಗೌಡರ ರಾಜೀನಾಮೆ ಕುರಿತು ಪ್ರತಿಕ್ರಿಯೆ*
ವಯಕ್ತಿಕವಾಗಿ ಬಚ್ಚೆಗೌಡರ ಮೇಲೆ ಅಪಾರವಾದ ಗೌರವಿದ್ದು ಈ ಹಿಂದೆ ಜೆ ಪಿ ನಗರದ ನಿವಾಸದಲ್ಲಿ ಭೇಟಿ ಮಾಡಿದ ಸಂದರ್ಭ ಪಕ್ಷಕ್ಕೆ ರಾಜೀನಾಮೆ ನೀಡದಂತೆ ನಾನು ಮತ್ತು ನಮ್ಮ ತಂದೆಯವರು ಮನವಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷ ನೀಡುವ ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಎಚ್ಚರಿಸಿದ್ದೆವು ಆದರೂ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ. ರಾಜಕೀಯ ಜೀವನ ಅವರ ವಯಕ್ತಿಕ ನಿರ್ಧಾರ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿದ್ದು ಕಾರ್ಯಕರ್ತರು ಪಕ್ಷದ ಹಾಗೂ ಎನ್ ಡಿ ಎ ಅಭ್ಯರ್ಥಿ ಡಾ. ಕೆ ಸುಧಾಕರ್ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸಲಿದ್ದಾರೆ ಎಂದರು.
*ಬಿಜೆಪಿ ಮತ್ತು ನಮ್ಮದು ನ್ಯಾಚುರಲ್ ಸಂಬಂಧ ಇದು ಪಕ್ಷಗಳ ನೈತಿಕ ಮೈತ್ರಿ – ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ*
ಒಮ್ಮೆ ಕಾಂಗ್ರೆಸ್ ಪಕ್ಷದ ಒಟ್ಟಿಗೆ ಮೈತ್ರಿ ಮಾಡಿಕೊಂಡಿದ್ದು ಅದು ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟುಮಾಡಿತ್ತು. ನಮ್ಮ ಜೆಡಿಎಸ್ ಪಕ್ಷವು ಒಂದು ಸ್ಥಾನಕ್ಕೆ ಬರಲು ಕಾರಣವಾಗಿತ್ತು. ಬಿಜೆಪಿ ಜೊತೆ ಮೈತ್ರಿ ನೈತಿಕ ಮೈತ್ರಿಯಾಗಿದ್ದು. ಜೆಡಿಎಸ್ ಮತ್ತು ಬಿಜೆಪಿ ಯ ಹೋರಾಟ ಕಾಂಗ್ರೆಸ್ ಪಕ್ಷದ ವಿರುದ್ಧವೇ ಆಗಿದೆ . ಈ ಒಟ್ಟಾಗಿ ಕಾಂಗ್ರೆಸ್ ವಿರುದ್ಧ ಸಮರ ಸಾರಿದ್ದೇವೆ ಎಂದರು.
*ಬಿಜೆಪಿ ಮತ್ತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರ ಸಮಾಗಮ : ಮಾಡಲಿದ್ಯಾ ಯುವ ಜೋಡಿ ಮೋಡಿ*
ಈ ಲೋಕಸಭೆ ಚುನಾವಣೆ ವಿಶೇಷವಾಗಿದ್ದು ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸುತ್ತಿದೆ. ಅಂತೆಯೇ ರಾಜ್ಯ ಯುವಘಟಕ ವಿಶೇಷ ಕಾಳಜಿಯಿಂದ ಶ್ರಮಿಸುತ್ತಿದ್ದು. ಬಿಜೆಪಿ ಯುವ ಘಟಕ ಅಧ್ಯಕ್ಷ ಧೀರಜ್ ಮುನಿರಾಜು ಹಾಗೂ ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಜಂಟಿಯಾಗಿ ಯುವಕರೊಂದಿಗೆ ಚುನಾವಣಾ ಅಖಾಡದಲ್ಲಿ ಹೊರಡಲಿದ್ದಾರೆ..
ಈ ವೇಳೆ ಬಿಜೆಪಿ ಯುವ ಘಟಕ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು,ದೇವನಹಳ್ಳಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಬಮೂಲ್ ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್, ಕೆ.ಎಂ.ಹನುಮಂತರಾಯಪ್ಪ, ಟಿ.ರಂಗರಾಜ್. ಇ.ಕೆ.ಕೃಷ್ಣಪ್ಪ, ಎಸ್.ಎಂ.ಹರೀಶ್ ಗೌಡ. ಎಂ.ಜಿ. ಶ್ರೀನಿವಾಸ್, ಬಿ.ಸಿ.ನಾರಾಯಣಸ್ವಾಮಿ ಹಾಜರಿದ್ದರು.