
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 14 (ವಿಜಯಮಿತ್ರ): ಸಂವಿಧಾನ ಶಿಲ್ಪಿ, ಭಾರತ ರತ್ನ ಹಾಗೂ ಮಹಾಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.