
ಚಿಕ್ಕಬಳ್ಳಾಪುರ ( ವಿಜಯಮಿತ್ರ) : ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಮೇಲೆ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ನೋಡಲ್ ಅಧಿಕಾರಿ ಮೌನೀಶ್ ಮೌದ್ಗಿಲ್ಗೆ ಕರೆ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕ್ಷಿ ಸಮೇತ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರು ದೂರು ದಾಖಲಿಸಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಮಾದವಾರದ ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ, ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸ್ಆ್ಯಪ್ನಲ್ಲಿ ಕರೆ ಮಾಡಿದ್ದಾರೆ. ಕರೆ ಜೊತೆಗೆ ಮೂರು ವಾಟ್ಸ್ಆ್ಯಪ್ ಸಂದೇಶ ಕೂಡ ನೀಡಿದ್ದಾರೆ ಎನ್ನಲಾಗಿದೆ.ವಾಟ್ಸ್ಆ್ಯಪ್ ಸಂದೇಶಗಳ ಸ್ಕ್ರೀನ್ ಶಾಟ್ ಮಾಹಿತಿಯನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
*ಎಫ್ಐಆರ್ನಲ್ಲಿ ಏನಿದೆ?*
ಕಳೆದ ಏಪ್ರಿಲ್ 25ರಂದು ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರ ಆಪ್ತ ಹಾಗೂ ಬಿಜೆಪಿಯ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆಗಿರುವ ಗೋವಿಂದಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದರು.
ಬಿಜೆಪಿ ಮುಖಂಡನ ಮನೆಯಲ್ಲಿ ಹಣ ಪತ್ತೆಯಾದ ಸಂದರ್ಭದಲ್ಲಿ ಡಾ.ಕೆ. ಸುಧಾಕರ್ ಅವರು ವಾಟ್ಸ್ ಆಪ್ ಕರೆ ಮಾಡಿದ್ದರು. ಇದೇ ವೇಳೆ ವಾಟ್ಸ್ಆ್ಯಪ್ನಲ್ಲಿ ಮೂರು ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಮೊದಲ ಸಂದೇಶದಲ್ಲಿ ‘ಮಾದವಾರ ಗೋವಿಂದಪ್ಪ ಐಟಿ ಟೀಂ’ ಎನ್ನಲಾಗಿದೆ.
2ನೇ ಸಂದೇಶದಲ್ಲಿ ನಾನು ನಿಮಗೆ ತುಂಬಾ ಆಭಾರಿಯಾಗಿರುತ್ತೇನೆ I will be great full to you regards (folded hands logo)
ಹಾಗೂ 3ನೇ ಸಂದೇಶ: ಆನಂದ್ ರತ್ಕಲ್ (ಹೆಸರು ಜೊತೆ ಫೋನ್ ನಂಬರ್) ಕಳುಹಿಸಿದ್ದಾರೆ ಎನ್ನಲಾಗಿದೆ.
ನೋಡಲ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರು ನೀಡಿದ ದೂರಿನ ಆಧಾರದಲ್ಲಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.