
ಬೆಂಗಳೂರು ಗ್ರಾಮಾಂತರ ಜಿಲ್ಲೆ,ಮೇ16 (ವಿಜಯಮಿತ್ರ ): ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್ ನಗರ ಮೈಸೂರು ಇಲ್ಲಿ 02 ವರ್ಷಗಳ ವಿಶೇಷ ಡಿ.ಇಡಿ(D.ED) ತರಬೇತಿ ಕಾರ್ಯಕ್ರಮಕ್ಕೆ
ಅರ್ಹ ವಿಶೇಷಚೇತನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿಶೇಷ ಡಿ.ಇಡಿ(D.ED) ಕಾರ್ಯಕ್ರಮಗಳು ಸಾಮಾನ್ಯ ಡಿ.ಇಡಿ(D.ED)ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 50% (ಎಸ್.ಸಿ ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇಕಡಾ 45%) ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಜೂನ್10ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್ಸೈಟ್ https://mysore.nic.in/en/ ನಲ್ಲಿ ಲಭ್ಯವಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
*ಶುಲ್ಕ ವಿವರ*
ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸುವ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಅಂಧ ಮಕ್ಕಳ ಭೋಧಕರ ತರಬೇತಿ ಕಾರ್ಯಕ್ರಮದಲ್ಲಿ SC,ST ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
*ಉದ್ಯೋಗ ಅವಕಾಶಗಳು*
*ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗ ಅವಕಾಶಗಳಿರುತ್ತವೆ*
1.ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು.
2.ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಬಹುದು.
3.CBSC ಶಾಲೆಗಳಲ್ಲಿ ಶಿಕ್ಷಕರಾಗಬಹುದು.
4.ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು.
5.ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು.
6.ರಾಷ್ಟ್ರೀಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು.
*ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು*
SSLC, 2nd PUC ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವಿಕಲಚೇತನ ವ್ಯಕ್ತಿಯಾಗಿದ್ದಲ್ಲಿ UDID ಗುರುತಿನ ಪತ್ರ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ- 080-29787441 ಗೆ ಸಂಪರ್ಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.