
ದೇವನಹಳ್ಳಿ ಮೇ 23 ( ವಿಜಯಮಿತ್ರ ) : ಈಗಿನ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ದಿಗೆ ಕುಂಠಿತವಾಗಿದೆ. ಇದರಿಂದ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಯಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೆ ಪಿ ಬೃಂಗೇಶ್ ತಿಳಿಸಿದರು.
ಬಿಜೆಪಿ ರೈತ ಮೋರ್ಚಾ ವತಿಯಿಂದ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 5 ರೂ ಗಳ ಸಹಾಯದನವನ್ನು 9 ತಿಂಗಳುಗಳಿಂದ ಸ್ಥಗಿತ ಗೊಳಿಸಿ ಶೀಘ್ರದಲ್ಲೇ ಬಾಕಿಯಿರುವ ಅನುದಾನವನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ಬಿಡುಗಡೆಮಾಡಿ ಅವುಗಳ ಅಭಿವೃದ್ಧಿಗೆ ಸಹಾಯ ಮಾಡಬೇಕಿದೆ. ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡದಿದ್ದರೆ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನೀತಿಯ ಬಗ್ಗೆ ರಾಜ್ಯಾದ್ಯಾಂತ ಹೋರಾಟವನ್ನು ರೂಪಿಸಲಾಗುವುದು ಎಂದರು.
ಜೂನ್ ತಿಂಗಳ ಮುಂಗಾರು ಮಳೆ ಪ್ರಾರಂಭವಾಗಿರುವ ಕಾರಣ ರೈತರಿಗೆ ಸಮಾರ್ಪಕವಾಗಿ ಉತ್ತಮ ಬಿತ್ತನೆ ಬೀಜಗಳು ಹಾಗೂ ರಾಸಾಯನಿಕ ಗೋಬ್ಬರಗಳು ಮತ್ತು ಎಲ್ಲಾ ತರಹದ ಸಸಿಗಳು ಅತೀ ಶೀಘ್ರದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.
ರಾಜ್ಯದ ರೈತರ ಕುಂದು ಕೊರತೆಗಳನ್ನು ಕೂಡಲೇ ಪರಿಹರಿಸಿ ಕೊಡುವಂತೆ ರೈತರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೆಚ್. ಎಂ. ರವಿಕುಮಾರ್ ಮಾತನಾಡಿ ರಾಜ್ಯ ಸರ್ಕಾರ ಪ್ರಾಯೋಜಿತ ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಸ್ವಾತಂತ್ರ ಸುವರ್ಣ ಮಹೋತ್ಸವದ ನೆನಪಿಗಾಗಿ ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಘೋಷಣೆಮಾಡಿದ್ದು , ಇಲ್ಲಿಯ ವರೆಗೂ ರಾಜ್ಯದಲ್ಲಿ 490 ರೈತ ಉತ್ಪಾದಕ ಸಂಸ್ಥೆಗಳು ರಚನೆಯಾಗಿವೆ,ಈ ಸಂಸ್ಥೆಗಳಿಗೆ ಅಂದಾಜು 150ಕೋಟಿ ರೂಪಾಯಿಗಳ ಅನುದಾನ ಕೋಟಿ ನೀಡಿದ್ದು. ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ 12 % ರಷ್ಟು ಮಾತ್ರ ಅನುದಾನ ಬಿಡುಗಡೆ ಮಾಡಿದ್ದು ಉಳಿದ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸುವ ಮೂಲಕ ರೈತರಿಗೆ ನೇರವಾಗಬೇಕಿದೆ. ರಾಜ್ಯ ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಘಟಕದ ವತಿಯಿಂದ ಉಗ್ರ ಹೋರಾಟಕ್ಕೆಗೊಳ್ಳಲಾಗುವುದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಜಿಲ್ಲಾ ಮಾದ್ಯಮ ಪ್ರಮುಖ್ ನೆಲಮಂಗಲ ರಾಜು, ಮಂಡಲ ಅಧ್ಯಕ್ಷ ಚೌಧರಿ, ಶಿವರಾಜು, ಕೆ.ಸಿ.ಮುನಿರಾಜು, ಆರ್.ಕೆ.ನಂಜೇಗೌಡ, ಸಿದ್ದಲಿಂಗಮೂರ್ತಿ, ಹೋಬಳಿ ಅಧ್ಯಕ್ಷ ಎ.ಆರ್.ವೆಂಕಟೇಗೌಡ, ಬೊಮ್ಮವಾರ ರಮೇಶ್, ಅಶ್ವತ್ಥ್ಗೌಡ, ನಾಲ್ಕು ತಾಲ್ಲೂಕಿನ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.