ದೊಡ್ಡಬಳ್ಳಾಪುರ ಮೇ 29 ( ವಿಜಯಮಿತ್ರ ) : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ರಾಷ್ಟ್ರಮಟ್ಟದ ಅಂತರ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸಲು ಕ್ರೀಡಾಪಟು ಚೆನೈ ಗೆ ತೆರಳುತ್ತಿದ್ದು. ವಿಚಾರ ತಿಳಿದ ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್. ವಿ. ಪ್ರವೀಣ್ ಕುಮಾರ್ ಸಂಘದ ಪರವಾಗಿ ಅವರಿಗೆ ಹುರಿದುಂಬಿಸಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ಪರವಾಗಿ ಆರ್ಥಿಕವಾಗಿ ಸಹಾಯವಾಗಲೆಂದು ಪ್ರೋತ್ಸಹ ಧನದ ಚೆಕ್ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಕಾಲೇಜಿನಲ್ಲಿ ಖೋಖೊ ಹಾಗೂ ಕಬಡ್ಡಿ ಕ್ರೀಡೆಗಳನ್ನು ಆಯೋಜಿಸುವುದಾಗಿ ತಿಳಿಸಿದರು.ಇನ್ನೂ ಹೆಚ್ಚಿನ ರೀತಿಯಲ್ಲಿ ವಿಧ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ! ಸದಾಶಿವ, ರಾಮ ಚಂದ್ರ ಗೌಡ, ಪ್ರಾದ್ಯಪಕರಾದ ಶ್ರೀನಿವಾಸ್, ಸಂಘದ ಖಜಾಂಜಿ ಮಹೇಶ್, ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು….
