
ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ ಇವರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ದಿಸೆಯಲ್ಲಿಯೇ ನಮ್ಮಲ್ಲಿ ರಾಷ್ಟ್ರಸೇವೆಯ ಮನೋಭಾವನೆಯನ್ನು ಬೆಳೆಸುತ್ತದೆ. ಮುಂದೆ ಉತ್ತಮ ಪ್ರಜೆಯಾಗಿ ದೇಶಸೇವೆಗೆ ಮುಂದಾಗಲು ಎನ್ಎಸ್ಎಸ್ ಸ್ಫೂರ್ತಿದಾಯಕವಾದ ಕಾರಣ ಎಲ್ಲರೂ ಸಕ್ರಿಯರಾಗಿ ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು, ಮುಖಂಡರು, ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿ ಮತ್ತು ಸದಸ್ಯರು ಉಪಸ್ಥಿತರಿದ್ದರು.