ಕಾಡನ್ನು ಬೆಳಸಿ ನಾಡನ್ನು ಉಳಿಸಿ ಎಂಬ ಧೇಯ ವಾಕ್ಯವು ಕೇವಲ ಹೇಳಿಕೆಗಷ್ಟೇ ಸೀಮಿತವಾಗಿದ್ದು . ಕಾರ್ಯರೂಪಕ್ಕೆ ತರುವ ಕಾಯಕ ನಮ್ಮಿಂದ ಆಗಬೇಕಿದೆ. ಈ ಉದ್ದೇಶದಿಂದ ಪ್ರತಿ ಮನೆಗೂ ತೆಂಗಿನ ಸಸಿ ವಿತರಣೆ ಮಾಡುವ ಮೂಲಕ ಪರಿಸರದ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಖ್ಯಾತ ವಕೀಲರು, ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕ ರವಿ ಮಾವಿನ ಕುಂಟೆ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ವತಿಯಿಂದ ಸಾದೇನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಸಸಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮಸ್ಥರಿಗೆ ತೆಂಗಿನ ಸಸಿ ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು ಪರಿಸರ ರಕ್ಷಣೆ ಸಂರಕ್ಷಣೆ ಎಂಬ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವಾಗಿವೆ. ಅರಣ್ಯನಾಶ, ವನ್ಯಜೀವಿಗಳ ಮಾರಣಹೋಮ ನೆಡೆಯುತ್ತಿದ್ದು ಅದನ್ನು ತಡೆಯುವ ಕಾರ್ಯ ನಮ್ಮಿಂದ ಆಗಬೇಕಿದೆ . ವಿಶ್ವ ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗದೆ. ಪ್ರತಿಯೊಬ್ಬರೂ ಪ್ರತಿನಿತ್ಯ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ಮೂಲಕ ಆಚರಿಸಬೇಕಿದೆ ಎಂದರು.
ಕಳೆದ ಬಾರಿ ಹಲವು ಗಣ್ಯ ಸಮ್ಮುಖದಲ್ಲಿ ಸಾವಿರಾರು ಜನತೆಗೆ ಸಸಿ ವಿತರಣಾ ಕಾರ್ಯಕ್ರಮವನ್ನು ನಮ್ಮ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದು. ಅಂತೆಯೇ ಈ ಬಾರಿಯೂ ಸಾದೇನಹಳ್ಳಿ ಗ್ರಾಮದಲ್ಲಿ ಪ್ರತಿ ಮನೆಮನೆಗೂ ತೆಂಗಿನ ಸಸಿ ವಿತರಣೆ ಮಾಡುವ ಕಾರ್ಯವನ್ನು ಸ್ಥಳೀಯ ಮುಖಂಡರ ಬೆಂಬಲದೊಂದಿಗೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಆಯೋಜನೆ ಮಾಡಿದೆ. ಪ್ರತಿ ಮನೆಯಲ್ಲೂ ಸಸಿ ನೆಟ್ಟು ಪೋಷಿಸುವ ಕಾರ್ಯ ಮೊದಲಾಗಲಿ ಎಂಬುದೇ ನಮ್ಮ ಈ ಕಾರ್ಯಕ್ರಮದ ಉದ್ದೇಶ ಎಂದರು.

ಕಾರ್ಯಕ್ರಮದ ಆಯೋಜನೆಗೆ ಸಹಕರಿಸಿದ ರಾಜನಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕಣ್ಣ ಸೇರಿದಂತೆ ಸ್ಥಳೀಯ ಮುಖಂಡರಾದ ಪ್ರಭಾಕರ್ ಅಪಾಯನ್ನಗೌಡ್ರು ಧ್ರುವನಾರಾಯಣ ರವರಿಗೆ ಧನ್ಯವಾದ ಅರ್ಪಿಸಿದರು.
ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ತಾಲೂಕು ಘಟಕದ ಅಧ್ಯಕ್ಷ ಶ್ರೀರಾಮ್ ಮಾತನಾಡಿ ಪರಿಸರ ದಿನಾಚರಣೆ ಪ್ರತಿಯೊಬ್ಬರು ಆಚರಿಸುತ್ತಾರೆ ಕೇವಲ ಗಿಡ ನೆಟ್ಟು ಫೋಟೋ ತೆಗೆಸಿಕೊಂಡರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ಕುರಿತು ಜನತೆಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಕಾರ್ಯಕ್ರಮವನ್ನು ರೂಪಿಸುವ ಸಂದರ್ಭದಲ್ಲಿ ಕಾರ್ಯಕ್ರಮವು ವಿಶೇಷವಾಗಿ ಇರಬೇಕೆಂದು ಸಮಿತಿಯು ತೀರ್ಮಾನಿಸಿ ಗ್ರಾಮದ ಪ್ರತಿ ಮನೆಮನೆಗೂ ಸಸಿ ವಿತರಣೆ ಮಾಡುವ ಮೂಲಕ ವಿಶೇಷ ರೀತಿಯ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ. ಈ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.
ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷ ಅನಂತ್ ಕುಮಾರ್ ಮಾತನಾಡಿ ವಿಶ್ವ ಪರಿಸರ ದಿನಾಚರಣೆ ಎಂದು ನಾವೆಲ್ಲರೂ ಒಂದು ಶಪಥ ಮಾಡಬೇಕಿದೆ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ನೆಟ್ಟು ಪೋಷಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಬೇಕಿದೆ. ಪರಿಸರದ ನೆರವಿಲ್ಲದೆ ಮನುಷ್ಯನ ಜೀವನ ಶೂನ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗೂ ಎರಡು ಕಲ್ಪವೃಕ್ಷಗಳನ್ನು ವಿತರಣೆ ಮಾಡಲಾಗಿದ್ದು. ಸಸಿ ನೆಟ್ಟು ಪೋಷಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ದೊರೆತಿದ್ದು. ರಾಜ್ಯದ್ಯಂತ ಜನತೆ ಸ್ವಯಂ ಪ್ರೇರಿತರಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಲಿ ಮುಂದೆ ನಮ್ಮೆಲ್ಲರ ಆಶಯ ಎಂದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕಣ್ಣ ಮಾತನಾಡಿ ಚಿರಋಣಿ ಕನ್ನಡಾಂಬೆ ಹೊರಟ ಸಮಿತಿಯ ಪದಾಧಿಕಾರಿಗಳು ನಮ್ಮ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಉತ್ತಮ ಕಾರ್ಯಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ಪರಿಸರವನ್ನು ರಕ್ಷಿಸುವುದು ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕೊಟ್ಟಿರುವ ಎಲ್ಲಾ ಪದಾಧಿಕಾರಿಗಳು ಶುಭವಾಗಲಿ ಎಂದು ಹಾರೈಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅನ್ನದಾಸೋಹಿ ಮಲ್ಲೇಶ್ ಸಹಯೋಗದೊಂದಿಗೆ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಆಹಾರ ಮತ್ತು ವಸ್ತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್, ರಾಜನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ (ಚನ್ನಮ್ಮ ), ಸಾದೇನಹಳ್ಳಿ ಹಾಲು ಉತ್ಪಾದಕರ ಸಂಕೀರ್ಣ ಸಂಘದ ಅಧ್ಯಕ್ಷ ಪ್ರಭಾಕರ್, ಮುಖಂಡರ ಅಪ್ಪಣ್ಣ ಗೌಡ್ರು, ಧ್ರುವನಾರಾಯಣ್, ಸೇರಿದಂತೆ ಹಲವರು ಉಪಸ್ಥಿರಿದ್ದರು.
