
ದೊಡ್ಡಬಳ್ಳಾಪುರ : ಸರಹು ಅಭಿಯಾನದ ಮೂಲಕ ವಿನೂತನ ಕಾರ್ಯಕ್ರಮಕ್ಕೆ ಮುಂದಾದ ಯುವ ಸಂಚಲನ ಯುವಕರ ಪಡೆ, ಸಾಕ್ಷ್ಯಚಿತ್ರಗಳ ಪ್ರದರ್ಶನ ಮಾಡುವ ಮೂಲಕ ಕೆರೆ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ.
ಯುವ ಸಂಚಲನ (ರಿ.) ದೊಡ್ಡಬಳ್ಳಾಪುರ, ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಹಾಗೂ ಸಂವಿಧಾನ ಸಾಥಿ ಇವರ ಸಂಯುಕ್ತ ಆಶ್ರಯದಲ್ಲಿ.ಸರಹು ಅಭಿಯಾನದ ಮೂಲಕ ಅರ್ಕಾವತಿ ನದಿ ಜಲ ಮೂಲಗಳ ಸಂರಕ್ಷಣೆಗಾಗಿ ಸಾಕ್ಷ್ಯಚಿತ್ರಗಳ ಪ್ರದರ್ಶನ ವನ್ನು ತಾಲ್ಲೂಕಿನ ಕಾಲೇಜುಗಳಲ್ಲಿ ಮಾಡಲಾಗುವುದು ಎಂದು ಯುವಸಂಚಲನ ಅಧ್ಯಕ್ಷ ಚಿದಾನಂದ್ ಮೂರ್ತಿ ತಿಳಿಸಿದರು.
ನಗರದ ರೈಲ್ವೆ ಸ್ಟೇಷನ್ ಸಮೀಪದ ಸೂರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 18 ರಂದು ಮಧ್ಯಾಹ್ನ 2:30 ಕ್ಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ, ರಾಷ್ಟ್ರೀಯ ಹಾಗೂ ರಾಜ್ಯದ ಅತ್ಯುತ್ತಮ ಬಾಲ ನಟ ಪ್ರಶಸ್ತಿ ವಿಜೇತ ಕೆ.ಮನೋಹರ, ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಡಾ:ಹೆಚ್ ಜಿ ವಿಜಯಕುಮಾರ್, ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ ಸಿ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.