
ದೊಡ್ಡಬಳ್ಳಾಪುರ ಆಗಸ್ಟ್ 02 ( ವಿಜಯಮಿತ್ರ) : ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ನಿರ್ಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್.ಧೃವಕುಮಾರ್ ಆಯ್ಕೆಯಾಗಿದ್ದಾರೆ.
ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮಿಸಲಾತಿ ಬದಲಾದ ಹಿನ್ನಲೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅರಳು ಮಲ್ಲಿಗೆ ಗ್ರಾಮಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ದ್ರಾಕ್ಷಾಯಿಣಿ, ಸಹಾಯಕ ಚುನಾವಣೆ ಅಧಿಕಾರಿ ಶಶಿಧರ್ ನೇತೃತ್ವದಲ್ಲಿ ಚುನಾವಣೆ ನಡೆಯಿತು, ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷರ ಎರಡು ಸ್ಥಾನಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಲಭಿಸಿದೆ.
18 ಸದಸ್ಯತ್ವ ಬಲದ ಅರಳು ಮಲ್ಲಿಗೆ ಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಲಾ ಸಿದ್ದೇಗೌಡ ಮತ್ತು ಮಂಜುಳಾ ಸ್ಪರ್ದಿಸಿದ್ದು, ಮಂಜುಳಾ 07 ಮತ ಪಡೆದರೆ, ನಿರ್ಮಲಾ ಸಿದ್ದೇಗೌಡ 11 ಮತಗಳನ್ನು ಪಡೆಯುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೃವಕುಮಾರ್ ಹಾಗೂ ವೆಂಕಟೇಶ್ ಸ್ಪರ್ಧಿಸಿದ್ದು, ವೆಂಕಟೇಶ್ ಅವರು 08 ಮತಗಳನ್ನು ಪಡೆದರೆ, ದೃವ ಕುಮಾರ್ ಅವರು 10 ಮತಗಳನ್ನು ಪಡೆಯುವ ಮೂಲಕ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ,ಬಿ. ಡಿ. ಸಿ. ಸಿ. ಬ್ಯಾಂಕ್ ನಿರ್ದೇಶಕರಾದ ಚುಂಚಗೌಡರ,ನಗರಸಭಾ ಸದಸ್ಯರಾದ ಶಿವಶಂಕರ್,ಚಂದ್ರ ಮೋಹನ್, ನಾಗರಾಜು, ಕಾಂಗ್ರೆಸ್ ಮುಖಂಡರಾದ ಭೀಮಣ್ಣ, ಮಂಜುನಾಥ್ ಮುಂತಾದವರು ಅಭಿನಂದಿಸಿದ್ದಾರೆ.