
ಆಗಸ್ಟ್ 05 ( ವಿಜಯ ಮಿತ್ರ ) : ನಿರಂತರ 3ನೇ ದಿನಕ್ಕೆ ಕಾಲಿಟ್ಟಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸಮಾಜ ಸೇವಕರು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್ ಎಂ. ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು 2 ನೇ ದಿನದ ಮೈಸೂರು ಚಲೋ ಪಾದಯಾತ್ರೆ ಯಶಸ್ವೀಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಪಾದಯಾತ್ರೆ ನಮ್ಮ ಶಕ್ತಿ ಪ್ರದರ್ಶನಕ್ಕಾಗಿ ಅಲ್ಲ ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ ಈ ಕಾರ್ಯದಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಭಾಗವಹಿಸುವುದಷ್ಟೇ ಅಲ್ಲದೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯಕರ್ತರು ವಿಶೇಷವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಮೈಸೂರು ಚಲೋ ಕಾರ್ಯಕ್ರಮವನ್ನು ಯಶಸ್ವೀ ಗೊಳಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಂತಿನಗರ ಪ್ರವೀಣ್, ಮುತ್ತೂರು ಮೂರ್ತಿ, ಕೋದಂಡರಾಮ, ಗುಡದಹಳ್ಳಿಆಶಾ, ಮುನಿರತ್ನಮ್ಮ,ಗೌರಮ್ಮ, ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.