
ದೊಡ್ಡಬಳ್ಳಾಪುರ ಆಗಸ್ಟ್ 15( ವಿಜಯಮಿತ್ರ) : ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಕ್ಕಳಿಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭೀಮಾನ, ದೇಶಪ್ರೇಮ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕಿದೆ ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕುಮಾರ್ ತಿಳಿಸಿದರು.
ತಾಲೂಕಿನ ರಾಜೀವ್ ಗಾಂಧಿ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಮಕ್ಕಳಿಗೆ ನಮ್ಮ ದೇಶದ ಸಂಸ್ಕೃತಿ, ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಪಟ್ಟ ಕಷ್ಟ,ತ್ಯಾಗ, ಬಲಿದಾನಗಳ ಬಗ್ಗೆ ತಿಳಿಸುವ ಅಗತ್ಯ ಇದೆ. ದೇಶ ಮೊದಲು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಹಾಗಾಗಿ ಬಾಲ್ಯದಲ್ಲಿಯೇ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟ ಕುರಿತ ಚರಿತ್ರೆ ತಿಳಿಸಬೇಕಿದೆ ಎಂದರು.
ಶಾಲೆಗೆ ಮುಖ್ಯ ಶಿಕ್ಷಕರಾದ ಎಸ್.ಚಿಕ್ಕಗಂಗಯ್ಯ ಮಾತನಾಡಿ ನಮ್ಮ ಭಾರತ ನಮಗೆ ಸುಮ್ಮನೆ ಸಿಕ್ಕಿಲ್ಲ, ಈ ಸ್ವಾತಂತ್ರ್ಯ ಭಾರತ ದೇಶಕ್ಕಾಗಿ ಲೆಕ್ಕವಿಲ್ಲದಷ್ಟು ಮಹಾನುಭಾವರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ . ಆಗಸ್ಟ್ 15 ನಮ್ಮ ಪೂರ್ವಜರ ಹೋರಾಟದ ಸಂಕೇತವಾಗಿದೆ. ಇಂದಿನ ಮಕ್ಕಳು, ಯುವಕರು ನಮಗೆ ಲಭಿಸಿರುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳದೆ, ದೇಶ ಕಟ್ಟಿ ಉಳಿಸುವ ಮಾರ್ಗದಲ್ಲಿ ಚಿಂತಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ರೀತಿಯ ಸಂಸ್ಕೃತಿಕ ಚಟುವಟಿಕೆಗಳು ಮಾಡುವ ಮೂಲಕ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಿವಣ್ಣ, ಸದಾಶಿವಣ್ಣ, ದಿವ್ಯಾ, ಭವ್ಯ ಶಿವಕುಮಾರ್ , ಆಶಾ, ಶಶಿಕುಮಾರ್, ಸರಸ್ವತಮ್ಮ ಸೇರಿದಂತೆ ಬಡಾವಣೆಯ ಹಲವು ಮುಖಂಡರು ಉಪಸ್ಥಿರಿದ್ದರು.