
ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿಗೆ ನಗರಸಭೆ ಚುಕ್ಕಾಣಿ ಹಿಡಿದಿದೆ.
ಸೆ. 23 ರಂದು ನಗರದ ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಉಪಾಧ್ಯಕ್ಷ ಸ್ಥಾನ ಜೆಡಿಎಸ್ಪಾಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿಯಿಂದ ಸ್ಪರ್ಧಿಸಿದ್ದ ಸುಮಿತ್ರ ಆನಂದ್ (ಬಿಜೆಪಿ) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು ದೊರೆತಿದ್ದು.ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೂಪಿಣಿ ಮಂಜುನಾಥ್ ರವರಿಗೆ 10 ಮತಗಳು ದೊರೆತಿದ್ದು, 23 ಮತಗಳನ್ನು ಪಡೆದ ಸುಮಿತ್ರ ಆನಂದ್ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ .ಉಪಾಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿ ಅಭ್ಯರ್ಥಿಮಲ್ಲೇಶ್ (ಜೆಡಿಎಸ್) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ಅವರಿಗೆ 10 ಮತಗಳು ದೊರೆತಿದ್ದು, 23ಮತಗಳನ್ನು ಪಡೆದ ಮಲ್ಲೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ .
ಕೇಂದ್ರ ಸಂಸದರಾದ ಡಾಕ್ಟರ್ ಕೆ ಸುಧಾಕರ್ ಮಾತನಾಡಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಕೂಟಕ್ಕೆ ಜಯ ದೊರೆತಿದ್ದು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಮಿತ್ರಾ ಆನಂದ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲೇಶ್ ಅವರಿಗೆ ಶುಭವಾಗಲಿ, ದೊಡ್ಡಬಳ್ಳಾಪುರ ನಗರವು ಬೆಂಗಳೂರಿಗೆ ಹೊಂದಿಕೊಂಡಿದ್ದು , ಸಾಕಷ್ಟು ಅಭಿವೃದ್ಧಿಯ ಅವಶ್ಯಕತೆ ಇದೆ. ಹೆಚ್ಚಿನ ಅನುದಾನಗಳನ್ನು ತರುವ ಮೂಲಕ ಸ್ಥಳೀಯವಾಗಿ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟು ಹೆಚ್ಚಿಸಲಿ ಎಂದರು.
ಈ ಹಿಂದೆಯಂತೆ ಈ ಬಾರಿಯೂ ಕೂಡ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಡಳಿತ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಮುಂದುವರೆಯಲಿದೆ, ಸ್ಥಳೀಯ ಶಾಸಕರೊಂದಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಿರುವುದು ಸಂತಸ ತಂದಿದೆ. ಉತ್ತಮ ಸೇವೆ ಸಲ್ಲಿಸುವ ಮೂಲಕ ನೂತನ ಆಡಳಿತ ವರ್ಗ ನಗರಸಭೆಯ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಹಾರೈಸಿದರು.
ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ದೊರೆಯುವ ಮೂಲಕ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅಂತಯೇ ಈ ಬಾರಿಯೂ ಕೂಡ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಸದಸ್ಯರು ಬೆಂಬಲ ಸೂಚಿಸಿದ್ದಾರೆ. 23 ಮತಗಳನ್ನು ಪಡೆಯುವ ಮೂಲಕ ಸುಮಿತ್ರ ಆನಂದ್ ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, 23 ಮತದ ಪಡೆಯುವ ಮೂಲಕ ಮಲ್ಲೇಶ್ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ನೂತನ ಆಡಳಿತ ವರ್ಗಕ್ಕೆ ಶುಭವಾಗಲಿ ಎಂದರು.
ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಹಾಗೂ ನಗರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ನೂತನ ಆಡಳಿತ ವರ್ಗ ಶ್ರಮಿಸಲಿದೆ ಎಂದರು.
ನೂತನ ಅಧ್ಯಕ್ಷರಾದ ಸುಮಿತ್ರ ಆನಂದ್ ಮಾತನಾಡಿ ಸಂಸದರು, ಶಾಸಕರು, ಹಾಗೂ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಮತವನ್ನು ನೀಡುವ ಮೂಲಕ ನೂತನ ಜವಾಬ್ದಾರಿಯನ್ನು ವಹಿಸಿದ್ದಾರೆ. ಹಿರಿಯರ ಮಾರ್ಗದರ್ಶನದೊಂದಿಗೆ ಸದಸ್ಯರ ಸಲಹೆ ಪಡೆಯುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವುದು. ವಿಶೇಷ ಯೋಜನೆಗಳನ್ನು ರೂಪಿಸುವ ಮೂಲಕ ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಲ್ಲಿ ಶ್ರಮಿಸಲಾಗುವುದು ಎಂದರು.
ನೂತನ ಉಪಾಧ್ಯಕ್ಷ ಮಲ್ಲೇಶ್ ಮಾತನಾಡಿ ನನಗೆ ನೀಡಿರುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಗರದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವುದು. ನಮ್ಮ ಮೇಲೆ ವಿಶ್ವಾಸವಿಟ್ಟು ಮತ ನೀಡಿದ ಸರ್ವರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಸದರಾದ ಡಾ.ಕೆ ಸುಧಾಕರ್ ಶಾಸಕ ಧೀರಜ್ ಮುನಿರಾಜು ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ‘ವೆಂಕಟೇಶ್( ಬಂತಿ ) ಅಭಿನಂದಿಸಿದರು.