
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಪಂಚಾಯಿತಿ ಚುನಾವಣೆ ನೆಡೆದಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಿದ್ದು ನೂತನ ಅಧ್ಯಕ್ಷರಾಗಿ ತೂಬಗೆರೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ( ಅ) ಮಹಿಳೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸದಸ್ಯರು ಪುಷ್ಪಮಾಲೆ ನೀಡಿವ ಮೂಲಕ ಶುಭಕೋರಿದರು
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಮಾತನಾಡಿ ತೂಬಗೆರೆಯಲ್ಲಿ ನೈರ್ಮಲ್ಯ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನನ್ನ ಮುಖ್ಯ ಉದ್ದೇಶ, ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರಸ್ತೆ ಬೀದಿದೀಪ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿಂದ್ದು ಸದಸ್ಯರ ಸಹಕಾರ ಮತ್ತು ಸಲಹೆಗಳೊಂದಿಗೆ ಶೀಘ್ರಗತಿಯಲ್ಲಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದರು.
ಸರ್ಕಾರದಿಂದ ಹೆಚ್ಚಿನ ಅನುದಾನಗಳನ್ನು ತರುವ ಮೂಲಕ ಸ್ಥಳೀಯವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.
ನೂತನ ಉಪಾಧ್ಯಕ್ಷೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಇಂದಿನ ಚುನಾವಣೆಯಲ್ಲಿ ಜಯಗಳಿಸಲು ಸಾಧ್ಯವಾಗಿದೆ. ಸಹ ಸದಸ್ಯರ ಸಹಕಾರದಿಂದ ಗ್ರಾಮ ಪಂಚಾಯತಿಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಲಾಗುವುದು, ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು.
ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ ) ಮಾತನಾಡಿ ಸ್ಥಳೀಯವಾಗಿ ಸಾರ್ವಜನಿಕರಿಗೆ ನಿವೇಶನ, ಇ -ಖಾತೆ, ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಸಾಕಷ್ಟು ಸಮಸ್ಯೆಗಳಿವೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೆಚ್ಚಿನ ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದಾಗಬೇಕಿದೆ.ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನ ತರುವ ಮೂಲಕ ಸ್ಥಳೀಯವಾಗಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂಥಗಲಿ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಕೃಷ್ಣ,ರಾಜ್ ಕುಮಾರ್, ನರಸಿಂಹನಹಳ್ಳಿ ಗಂಗರಾಜು, ಉದಯ ಆರಾಧ್ಯ, ವಾಸುದೇವ್, ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡರಾದ ಪುಟ್ಟಪ್ಪ, ಸುಬ್ರಹ್ಮಣ್ಯಪ್ಪ, ಯುವ ಮುಖಂಡ ಉದಯ ಆರಾಧ್ಯ, ಪಿಡಿಒ ವೆಂಕಟೇಶ್, ಮುನಿಕೃಷ್ಣಪ್ಪ, ನಾಗೇಶ್, ನಾಗರಾಜು, ಹರೀಶ್, ರಾಜಕುಮಾರ್, ಮಧು, ವೆಂಕಟೇಶ್, ಮುನಿರಾಜು, ಸೇರಿದಂತೆ ಹಲವರು ಉಪಸ್ಥಿತರಿದ್ದರು.