
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ, ಪುಷ್ಪಾರ್ಚನೆ ನೆರವೇರಿಸಿದರು.
*“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ*
*ಕನ್ನಡದ ಮೊದಲ ಶಿಲಾ ಶಾಸನ*
ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇರಿಸಲಾಗಿದೆ.
Ad
*ಹಲ್ಮಿಡಿ ಶಾಸನದ ಪ್ರತಿಕೃತಿ ಕುರಿತು ಒಂದಿಷ್ಟು ಮಾಹಿತಿ :
-ಎತ್ತರ: ನಾಲ್ಕೂವರೆ ಅಡಿ
-ಅಗಲ: 2 ಅಡಿ
-ದಪ್ಪ: 6 ಇಂಚು
-ತೂಕ: 450 ರಿಂದ 500 ಕಿಲೋ