
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆ ಆರ್ ಎಸ್ ಪಕ್ಷದ ವತಿಯಿಂದ ಪಕ್ಷದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು, ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಶೇಷವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಶುಭಾಶಯ ಕೋಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷರಾದ ಬಿ ಶಿವಶಂಕರ್ ನೇತೃತ್ವದಲ್ಲಿ ಕಾರ್ಮಿಕ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಿ ಶಿವಶಂಕರ್ ಮಾತನಾಡಿ ನಾಡು ನುಡಿ ಭಾಷೆಯ ಉಳಿವಿಗಾಗಿ ನಮ್ಮ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಶ್ರಮಿಸುತ್ತದೆ. ಕನ್ನಡ ರಾಜ್ಯೋತ್ಸವ ಎಂಬುದು ನಮ್ಮೆಲ್ಲರ ಹಬ್ಬ ಇದು ರಾಜ್ಯದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರಿಗೂ ಹಬ್ಬವಾಗಬೇಕಿದೆ . ಉತ್ತಮ ಜೀವನ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ಕರ್ನಾಟಕ ರಾಜ್ಯಕ್ಕೆ ಹೊರ ರಾಜ್ಯದವರು ನಮ್ಮ ಕನ್ನಡ ಭಾಷೆಯನ್ನು ಕಲಿಯುವ ಮೂಲಕ ಗೌರವ ಸಲ್ಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕಿದೆ . ಕನ್ನಡ ಭಾಷೆ ಕೇವಲ ಭಾಷೆಯಲ್ಲ ಅದು ನಮ್ಮ ಜೀವನಾಡಿ ಕನ್ನಡ ಭಾಷೆ ಉಳಿಯುವುದಕ್ಕಾಗಿ ನಮ್ಮ ಹೋರಾಟ ಸದಾ ಇರುತ್ತದೆ ಎಂದರು.
ಈ ಬಾರಿ ಶಿಗ್ಗಾವಿಯಲ್ಲಿ ಕೆ ಆರ್ ಎಸ್ ಬಾವುಟ ಹಾರುತ್ತದೆ
ಶಿಗ್ಗಾವಿ ಉಪಚುನಾವಣೆ ಕುರಿತು ಮಾತನಾಡಿದವರು ಕಳೆದ ಮೂರು ನಾಲ್ಕು ತಿಂಗಳಿನಲ್ಲಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಕೆಲಸಗಳು ಕೆಆರ್ಎಸ್ ಪಕ್ಷದಿಂದ ನಡೆದಿದೆ. ನಮ್ಮ ನಾಯಕರ ರವಿಕೃಷ್ಣ ರೆಡ್ಡಿ ಅವರು ಈ ಬಾರಿಯ ಚುನಾವಣೆಯಲ್ಲಿ ಜಯ ಸಾಧಿಸಲಿದ್ದಾರೆ. ಶಿಗ್ಗಾವಿ ಜನತೆಯ ಒಲವು ಕೆ ಆರ್ ಎಸ್ ಪಕ್ಷದ ಕಡೆ ಹೆಚ್ಚಾಗಿದೆ, ಸ್ವಚ್ಛ ನಿಷ್ಠೆ ಪ್ರಾಮಾಣಿಕತೆಯ ರಾಜಕೀಯವನ್ನು ಶಿಗ್ಗಾವಿ ಬಯಸುತ್ತಿದ್ದು, ಶಿಗ್ಗಾವಿ ಜನತೆಗೆ ಇದೊಂದು ಉತ್ತಮ ಅವಕಾಶವಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ವೆಂದರೆ ಹೇಗಿರುತ್ತದೆ ಎಂಬುದನ್ನು ಅರಿಯಬೇಕಾದರೆ ಒಮ್ಮೆ ಕೆ ಆರ್ ಎಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರ ನೀಡಬೇಕಿದೆ ಎಂದರು.
ತಾಲ್ಲೂಕಿನ ಮಲ್ಲತ್ಹಳ್ಳಿ ದೇವಾಲಯದ ಒಳಗಡೆ ದಲಿತರನ್ನು ನಿಷೇಧಿಸಿದ ಪ್ರಕರಣ ಕುರಿತು ಮಾತಾಡಿದವರು 21ನೇ ಶತಮಾನದಲ್ಲಿ ಇದ್ದರೂ ಇಂತಹ ಪ್ರಕರಣಗಳು ದಾಖಲಾಗುತ್ತಿರುವುದು ವಿಪರ್ಯಾಸವೇ ಸರಿ, ಈ ಕುರಿತು ಅಧಿಕಾರಿಗಳು ಕೂಡಲೇ ಪ್ರತಿಕ್ರಿಯಿಸಿ ನನ್ನ ಸಮುದಾಯಕ್ಕೆ ಸೂಕ್ತ ಪರಿಹಾರ ಸೂಚಿಸಬೇಕಿದೆ. ನಗರಕ್ಕೆ ಕೇವಲ 3 ಕಿ.ಮೀ ಅಂತರದಲ್ಲಿರುವ ಗ್ರಾಮದಲ್ಲಿ ಈ ಪರಿಸ್ಥಿತಿ ಆದರೆ ಬೇರೆ ಗ್ರಾಮಗಳ ಕಥೆ ಏನು …?? ಈ ರೀತಿಯ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ನಮ್ಮ ಕೆ ಆರ್ ಎಸ್ ಪಕ್ಷದ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ ಗೌರವ ಅಧ್ಯಕ್ಷ ವೆಂಕಟೇಶ್ ಮೂರ್ತಿ,ಜಿಲ್ಲೆ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಲೀಲಾ ರಾಮ್,ವಕೀಲರಾದ ನರೇಂದ್ರ, ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಶ್ರೀನಿವಾಸ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಬಾಷಾ,ತಾಲ್ಲೂಕು ಸಮಿತಿಯ ಆರೂಢಿ ಮಣಿ,ಮುಖಂಡರಾದ ವೇಣು, ಚಂದ್ರಶೇಖರ್ ಡಿ ಉಪ್ಪಾರ್, ಮಹಿಳಾ ಘಟಕ ಪದಾಧಿಕಾರಿಗಳಾದ ರಂಜಿತಾ, ಸರಸ್ವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.