
ದೊಡ್ಡಬಳ್ಳಾಪುರ ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪ ರವರು ಸ್ಥಾಪಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(47/74/75) ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಅತಿ ವೇಗವಾಗಿ ಬೆಳೆಯುತ್ತಿದ್ದು . ಪ್ರತಿ ತಾಲೂಕಿನಲ್ಲೂ ಸಂಘಟನೆಯ ಬಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಮಿತಿಯ ವಿವಿಧ ಸಹ ಸಮಿತಿಗಳನ್ನು ರಚಿಸುವ ಇಂದು ಚರ್ಚಿಸಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ನಾಗಮಂಗಲ ವೆಂಕಟೇಶ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಜಿಲ್ಲಾ ಸಂಚಾಲಕರಾದ ರಾಮಮೂರ್ತಿ (ರಾಮು) ನೇರಳಘಟ್ಟ ನೇತೃತ್ವದಲ್ಲಿ ಸಂಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರಬಲವಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದೆ . ರಾಜ್ಯ ಸಮಿತಿಯು ಸಮಿತಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಪ್ರತಿ ತಾಲೂಕಿನ ವ್ಯಾಪ್ತಿಗೆ ಉಪ ಸಮಿತಿಗಳ ರಚನೆಗೆ ಮುಂದಾಗಿದೆ , ತಾಲೂಕು ಸಮಿತಿ,ಕಾರ್ಯಕಾರಿ ಸಮಿತಿ,ಮಹಿಳಾ ಸಮಿತಿ,ನೌಕರರ ಸಮಿತಿ,ವಿದ್ಯಾರ್ಥಿ ಸಮಿತಿ ,ಅಲ್ಪಸಂಖ್ಯಾತರ ಸಮಿತಿ, ಕಲಾತಂಡ ಸಮಿತಿಗಳಿಗೆ ಅರ್ಹ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ತಾಲೂಕುಗಳಿದ್ದು ಪ್ರತಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಜವಾಬ್ದಾರಿಯನ್ನು ಜಿಲ್ಲಾ ಸಂಚಾಲಕರಾದ ರಾಮಮೂರ್ತಿ (ರಾಮು) ನೇರಳಘಟ್ಟ ರವರಿಗೆ ವಹಿಸಲಾಗಿದೆ. ಸಂಘಟನೆಯಿಂದ ಮತ್ತಷ್ಟು ಸಮಾಜಮುಖಿ ದಲಿತಪರ ಹೋರಾಟಗಳು ನಡೆಯಬೇಕಿದೆ. ಜಿಲ್ಲೆಯಲ್ಲಿ ರೈತರ ಸಾಗುವಳಿ ಚೀಟಿ ವಿತರಣಾ ಸಮಸ್ಯೆ, ವಸತಿ ಸಮಸ್ಯೆ, ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು ಇವುಗಳ ವಿರುದ್ಧವಾಗಿ ನಮ್ಮ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಲಿದೆ ಎಂದರು.
ರಾಜ್ಯ ಸಮಿತಿ ಸದಸ್ಯ ನೆಲಮಂಗಲ ಬಸವರಾಜು ಮಾತನಾಡಿ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಅವರ ಆದೇಶದ ಮೇರೆಗೆ ಇಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡ ಸಭೆ ಕರೆಯಲಾಗಿದೆ, ಜಿಲ್ಲೆ ಮತ್ತು ರಾಜ್ಯದಲ್ಲಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಇಂದು ಸರ್ವ ಮುಖಂಡರ ಸಭೆ ಕರೆಯಲಾಗಿದೆ, ರಾಜ್ಯ ಸಂಚಾಲಕರ ಆದೇಶದಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪ್ರತಿ ಜಿಲ್ಲೆ ಹಾಗೂ ಪ್ರತಿ ತಾಲೂಕಿನಾದ್ಯಂತ ಸಂಘಟನೆಯನ್ನು ಬಲಪಡಿಸಿ ಸಮುದಾಯಕ್ಕೆ ಉತ್ತಮ ಸೇವೆ ಸಲ್ಲಿಸಲು ಪದಾಧಿಕಾರಿಗಳಿಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ , ಕೇವಲ ಸಂಘಟನೆಯನ್ನು ಬಲಪಡಿಸುವುದಷ್ಟೇ ಅಲ್ಲದೆ ಸಮುದಾಯಕ್ಕೆ ಅರಿವು ಮೂಡಿಸುವ ಕಾರ್ಯಕ್ರಮ ನಮ್ಮ ಸಮಿತಿ ವತಿಯಿಂದ ನಡೆಯುತ್ತಿದೆ ಎಂದರು.
ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನ ಸಂಚಾಲಕರು ಬಸವರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನ ಸಂಚಾಲಕರು ಜಿ.ನರಸಿಂಹಮೂರ್ತಿ,ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನಾ ಸಂಚಾಲಕ ಬೈಲಾಂಜಿನಮೂರ್ತಿ, ಎನ್.ನರಸಿಂಹಮೂರ್ತಿ,ಮನೋಜ್.ವಿ, ನಾಗರತ್ನಮ್ಮ ಮಲ್ಲೋಹಳ್ಳಿ, ಆನಂದ್ ಸಕ್ಕರೆ ಗೊಲ್ಲಹಳ್ಳಿ, ಹನುಮಂತಯ್ಯ, ಹನುಮಯ್ಯ, ತಾಲ್ಲೂಕು ಸಂಘಟನಾ ಸಂಚಾಲಕರಾದ ನಂದಿಗುಂದ ಮೈಲಾರಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.