
ಚನ್ನಪಟ್ಟಣ ಹಾಗೂ ಶಿಗ್ಗಾವಿ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯು ಕೊನೆ ಹಂತದವರೆಗೂ ನಿರ್ಧಾರವಾಗದ ಕಾರಣ ಸೂಕ್ತ ಪಕ್ಷ ಸಂಘಟನೆ ಯಾಗದ ಕಾರಣ ಚುನಾವಣೆಯಲ್ಲಿ ಸೋಲುಂಟಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಗೆ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಭರತ್ ಬೊಮ್ಮಾಯಿ ಯವರನ್ನು ಅಭ್ಯರ್ಥಿಗಳ ಆಯ್ಕೆ ಮಾಡಲಾಯಿತು, ಮೊದಲಿನಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದ ನಿಖಿಲ್ ಕುಮಾರಸ್ವಾಮಿ ಏಕಾಏಕಿ ಚನ್ನಪಟ್ಟಣ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾದರು, ಅಂತೆಯೇ ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಸ್ಪರ್ಧಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ತಿಳಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಭರತ್ ಬೊಮ್ಮಾಯಿ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಕೊನೆ ಕ್ಷಣದ ನಿರ್ಧಾರಗಳಿಂದ ಸ್ಥಳೀಯವಾಗಿ ಪಕ್ಷ ಸಂಘಟನೆ ಮಾಡುವುದರಲ್ಲಿ ಸಮಸ್ಯೆ ಉಂಟಾಗಿದ್ದು ಮುಂದಿನ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.
ಉಪಚುನಾವಣೆಯಲ್ಲಿ ಜನಾದೇಶವನ್ನು ಎನ್.ಡಿ.ಎ ಮೈತ್ರಿ ಒಪ್ಪಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ಮತ್ತು ಹಣ ಬಲವನ್ನು ಬಳಕೆ ಮಾಡುವ ಮೂಲಕ ಉಪಚುನಾವಣೆಯಲ್ಲಿ ಅಧಿಕಾರ ಹಿಡಿದಿದ್ದು ಕಾಂಗ್ರೆಸ್ ಪಕ್ಷದ ವಿರುದ್ಧ ನಮ್ಮ ಹೋರಾಟ ಸದಾ ಇರುತ್ತದೆ ಎಂದರು.