
ದೊಡ್ಡಬಳ್ಳಾಪುರ : ಕರ್ನಾಟಕ ರಾಷ್ಟ್ರ ಸಮಿತಿಯು ಭ್ರಷ್ಟಾಚಾರ ನಿರ್ಮೂಲನೆಗಾಗಿ ಶ್ರಮಿಸುವುದಷ್ಟೇ ಅಲ್ಲದೆ ನಾಡು-ನುಡಿ ಭಾಷೆ ಜಲದ ವಿಚಾರಗಳಲ್ಲಿ ಹೋರಾಟಕ್ಕೆ ಸದಾ ಸಿದ್ಧ, ರವಿಕೃಷ್ಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ನಮ್ಮ ಹೋರಾಟ ನಿರಂತರವಾಗಿ ಸಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ತಿಳಿಸಿದರು.
ಕೆ ಆರ್ ಎಸ್ ಪಕ್ಷ ತಾಲೂಕು ಘಟಕದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆ ಆರ್ ಎಸ್ ಸೇನಾನಿಗಳ ಸಹಾಯದೊಂದಿಗೆ ಇಂದು ತಾಲೂಕಿನಲ್ಲಿ ಕಚೇರಿಯನ್ನು ಪ್ರಾರಂಭಿಸಲಾಗಿದೆ . ಸಾರ್ವಜನಿಕರ ಅನುಕೂಲಕ್ಕಾಗಿ ಪಕ್ಷದ ನೂತನ ಕಚೇರಿಯನ್ನು ಪ್ರಾರಂಭಿಸಿದ್ದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.
ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಸದಾ ಜೀವಂತವಾಗಿರುತ್ತದೆ . ಕಚೇರಿ ಸ್ಥಾಪಿಸುವುದರ ಮುಖ್ಯ ಉದ್ದೇಶ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿದೆ, ಇದನ್ನು ಅರಿತು ನಮ್ಮ ಪಕ್ಷದ ಪದಾಧಿಕಾರಿಗಳು ನಿಷ್ಠೆಯಿಂದ ಸಾರ್ವಜನಿಕರಿಗೆ ಸ್ಪಂದಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ , ಜಿಲ್ಲಾ ಕಾರ್ಯದರ್ಶಿ ವೇಣು , ಜಿಲ್ಲಾ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಮಾರುತಿ, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷೆ ಲೀಲಾ ರಾಮ್, ತಾಲೂಕು ಘಟಕದ ಉಪಾಧ್ಯಕ್ಷ ಶ್ರೀನಿವಾಸ್ ಡಿ ಎಂ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಫಾರೂಕ್, ತಾಲೂಕು ಕಾರ್ಯಾಧ್ಯಕ್ಷ ತಾಜೂದ್ದೀನ್, ಸಂಘಟನಾ ಕಾರ್ಯದರ್ಶಿ ಬಾಲು, ಸಹ ಕಾರ್ಯದರ್ಶಿ ಚೌಡಪ್ಪ, ಮಂಜುನಾಥ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ರಂಜಿತಾ, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ಸರಸ್ವತಿ, ಕಾರ್ಯದರ್ಶಿಗಳಾದ ಮೌಲಾ ಜಾನ್, ನಂಜಪ್ಪ,ನಾರಾಯಣ, ಸೇರಿದಂತೆ ಹಲವರು ಉಪಸ್ಥಿತರಿದ್ದರು.