
ದೊಡ್ಡಬಳ್ಳಾಪುರ : ಪಾಲನಜೋಗಿಹಳ್ಳಿ ಕೆರೆಯ ಅಂಗಳವನ್ನು ಮುಚ್ಚಿ ಸುಮಾರು 60 ಅಡಿ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲು ಖಾಸಗಿಯವರು ಬಡಾವಣೆಯವರು ಮುಂದಾಗಿದ್ದಾರೆ, ಈ ಕುರಿತು ತಾಲೂಕು ಆಡಳಿತ ಈ ಕೊಡಲೇ ಸೂಕ್ತ ಕ್ರಮ ಕೈಗೊಂಡು ಕೆರೆ ಸಂಪತ್ತನ್ನು ಉಳಿಸಬೇಕೆಂದು ಹೋರಾಟಗಾರ ಪು.ಮಹೇಶ್ ತಿಳಿಸಿದರು
ತಾಲ್ಲೂಕಿನ ಪಾಲನಜೋಗಿಹಳ್ಳಿ ಕೆರೆಯ ಸರ್ವೆ ನಂ.21 ರಲ್ಲಿ 13-21 ಎ.ಗು ಜಮೀನಲ್ಲಿ 60 ಅಡಿಗಳ ವಿಸ್ತೀರ್ಣವನ್ನು ಖಾಸಗಿ ಬಡಾವಣೆಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ರಸ್ತೆಯನ್ನು ನಿರ್ಮಾಣ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ವತಿಯಿಂದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನೆಡೆಸಲಾಯಿತು
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಮ್ಮ ಜಿಲ್ಲೆಯು ಅತಿ ವೇಗವಾಗಿ ಬೆಳೆಯುತ್ತಿದ್ದು, ಕೆಲವು ಖಾಸಗಿಯವರು ಬಡಾವಣೆಗಳು ಇದನ್ನು ತಿಳಿದು, ಯಾವುದೇ ಸರಿಯಾದ ಅನುಮತಿಗಳಿಲ್ಲದೆ ಬಡಾವಣೆಗಳನ್ನು ಮಾಡಿ ಗ್ರಾಹಕರಿಗೆ ಟೋಪಿ ಹಾಕಿ ಮೋಸ ಮಾಡಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರು ಅನಂತಪುರ ಅಂತರ್ ರಾಜ್ಯ ಹೆದ್ದಾರಿಯಲ್ಲಿ ಪಾಲನಜೋಗಳ್ಳಿಯ ಸರ್ವೇ ನಂಬರ್ 21ರಲ್ಲಿ ಸುಮಾರು 13 ಎಕರೆಯಲ್ಲಿ ಕೆರೆ ಇದ್ದು ಮುಖ್ಯ ರಸ್ತೆಯಿಂದ ಬಡಾವಣೆಗೆ ರಸ್ತೆಯನ್ನು ನಿರ್ಮಾಣ ಮಾಡುತ್ತಿದ್ದು ಕೆರೆಯನ್ನು ಸಂಪೂರ್ಣವಾಗಿ ಮುಚ್ಚುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಂದಾಯ ಅಧಿಕಾರಿಗಳು ಈ ಕುರಿತು ತನಿಖೆ ನೆಡೆಸಿ ಸ್ಥಳ ಪರಿಶೀಲನೆ ಮಾಡುವ ಮೂಲಕ ಕೆರೆಯ ಸಂರಕ್ಷಣೆಯನ್ನು ಮಾಡಬೇಕಿದೆ ಎಂದರು.
ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಈ ಮೂಲಕ ಮನವಿ ಮಾಡುತ್ತೇವೆ ಕೆರೆ ಸಂಪನ್ಮೂಲ ಹಾಳಾಗುತ್ತಿದ್ದು , ಅದನ್ನು ಉಳಿಸುವ ಕಾರ್ಯ ಅತಿ ಶೀಘ್ರವಾಗಿ ನಡೆಯಬೇಕಿದೆ , ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಮುಖಾಂತರ ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕಿದೆ , ತಾವು ಈ ಅರ್ಜಿ ಬಂದ ಹತ್ತು ದಿನಗಳ ಒಳಗಾಗಿ ಸ್ಥಳ ಪರಿಶೀಲನೆ ಮಾಡದಿದ್ದಲ್ಲಿ ನಾವು ಕೆರೆಯ ಸ್ಥಳದಲ್ಲೇ ಗ್ರಾಮಸ್ಥರ ಸಮ್ಮುಖದಲ್ಲಿ ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಸ್ ಎಲ್ ಎನ್ ವೇಣು, ಖಜಾಂಚಿ ಆನಂದ್ ಕುಮಾರ್, ನಗರ ಅಧ್ಯಕ್ಷ ಶ್ರೀನಗರ ಬಶೀರ್, ನಗರ ಪ್ರಧಾನ ಕಾರ್ಯದರ್ಶಿ ಜೋಗಳ್ಳಿ ಅಮ್ಮು, ಕಾರ್ಯದರ್ಶಿ ಕೆ ಆರ್ ಮಂಜುನಾಥ ,ಮುಕ್ಕೇನಹಳ್ಳಿ ರವಿ ಸೇರಿದಂತೆ ಹಲವರು ಉಪಸಿತರಿದ್ದರು.