
ದೊಡ್ಡಬಳ್ಳಾಪುರ : ತಾಲ್ಲೂಕಿನ ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೆ ನಂ.57ರಲ್ಲಿ 10 ಎಕರೆ 25 ಗುಂಟೆ ಜಮೀನಿನ ಪೈಕಿ 6 ಎಕರೆ ಜಮೀನಿಗೆ ಸಂಬಂಧಿಸಿದಂತೆ ಕಾನೂನು ಬಾಹಿರವಾಗಿ ಮಂಜೂರು ಮಾಡಿಕೊಂಡಿರುವ ಜಮೀನನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಈ ಕುರಿತು ದಲಿತ ಮುಖಂಡ , ಸಂಘಟನೆಯ ಸಂಸ್ಥಾಪಕ ಅಧ್ಯಕ್ಷಯು. ಮುನಿರಾಜು ಮಾತನಾಡಿ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57 ರಲ್ಲಿ 10 ಎಕರೆ 25ಗುಂಟೆ ಜಮೀನಿಗೆ ಸಂಬಂಧಿಸಿದಂತೆ 6 ಎಕರೆ ಜಮೀನಿನಲ್ಲಿ ತಲಾ 1 ಎಕರೆ 20 ಗುಂಟೆಯಂತೆ 4 ಜನಕ್ಕೆ ಕಾನೂನು ಬಾಹಿರವಾಗಿ ದಾಖಲಾತಿಗಳನ್ನು ಮಾಡಿಕೊಂಡಿದ್ದಾರೆ.
ಅಧಿಕಾರಿಗಳು ಸ್ಥಳಕ್ಕೆ ಭೇಟಿಕೋಟ್ಟು ಪರಿಶೀಲನೆ ನೆಡೆಸಿ ಕಾನೂನು ಬಾಹಿರವಾಗಿ ಮಂಜೂರು ಮಾಡಿರುವ ಭೂಮಿಯನ್ನು ವಜಾ ಗೊಳಿಸುವ ಮುಖಾಂತರ ಸದರಿ ಜಾಗವನ್ನು ಸರ್ಕಾರವು ವಶಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪಕ್ಷದಲ್ಲಿ ಮುಂದೆ ಸಂಘಟನೆ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು