
ದೊಡ್ಡಬಳ್ಳಾಪುರ : ಇಂದಿನ ಕಾರ್ಯಕ್ರಮ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಮುಖ್ಯ ಉದ್ದೇಶ ಹೊಂದಿದ್ದು, ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಯ ಮಕ್ಕಳು ತುಂಬಾ ಉತ್ಸಾಹದಿಂದ ಪಾಲ್ಗೊಂಡಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್ ವಿ ಮಹೇಶ್ ತಿಳಿಸಿದರು
ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸೇವಾದಳ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹೇಳಿರುವಂತೆ ಸಮಾಜದಲ್ಲಿ ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಎಲ್ಲಾ ರಂಗಗಳಲ್ಲೂ ಉನ್ನತ ಮಟ್ಟದ ಸ್ಥಾನಗಳನ್ನು ಅಲಂಕರಿಸಿ ಉತ್ತಮ ಸಾಧನೆ ತೋರುವಂಥಗಲಿ ಎಂಬುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿ ರಾಷ್ಟ್ರೀಯ ಭಾವೈಕ್ಯತೆ ಕುರಿತು ಶಾಲಾ ಮಕ್ಕಳಿಗೆ ವಿಶೇಷ ಮಾಹಿತಿ ನೀಡಿದ ತಾಲ್ಲೂಕುದಂಡಧಿಕಾರಿಗಳಾದ ವಿದ್ಯಾವಿಭಾ ರಾಥೋಡ್ ರವರಿಗೆ ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಸಮಿತಿ ಸದಸ್ಯರ ಶ್ರಮ ಶ್ಲಾಘನಿಯ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಲಕ್ಷ್ಮೀಪತಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ 5 ಕಾರ್ಯಕ್ರಮಗಳನ್ನು ನಿರ್ವಹಿಸಲಾಗುವುದು, ಅಂತೆಯೇ ಇಂದು ತಾಲ್ಲೂಕು ಮಟ್ಟದಲ್ಲಿ ಭಾರತ ಸೇವಾದಳ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮವನ್ನು ತಾಲ್ಲೂಕು ಅಧ್ಯಕ್ಷರಾದ ಆರ್. ವಿ ಮಹೇಶ್ ಅವರ ನೇತೃತ್ವದಲ್ಲಿ ತಾಲ್ಲೂಕಿನ 13ಕ್ಕೂ ಅಧಿಕ ಶಾಲೆಗಳ ಮಕ್ಕಳು ಭಾಗವಹಿಸಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಮಾಡುವ ಸಾರ್ವಜನಿಕರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ಅರಿವು ಮೂಡಿಸುವಲ್ಲಿ ಉತ್ತಮ ಕಾರ್ಯಕ್ರಮ ರೂಪಿಸಿದ್ದು ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಸದಸ್ಯರಾದ ರವಿಕುಮಾರ್,ತಾಲ್ಲೂಕುದಂಡಧಿಕಾರಿ ವಿದ್ಯಾವಿಭಾ ರಾಥೋಡ್ , ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರಳಿಧರ್, ನಗರಸಭಾ ಅಧ್ಯಕ್ಷರಾದ ಸುಮಿತ್ರ ಆನಂದ್, ವಕೀಲರಾದ ಆರ್ ವಿ ಶಿವಕುಮಾರ್ ಸೇರಿದಂತೆ ತಾಲ್ಲೂಕು ಸಮಿತಿಯ ಸರ್ವ ಪಧಾದಿಕಾರಿಗಳು ಉಪಸ್ಥಿತರಿದ್ದರು.