ದೊಡ್ಡಬಳ್ಳಾಪುರ : ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.

ದೇವಾಲಯಕ್ಕೆ ಸಚಿವರು ತಮ್ಮ ಪುತ್ರ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿ ನರಸಿಂಹರಾಜು, ಶೃತಿ ಶ್ರೀ, ಪುತ್ರಿ ಡಾ. ಜ್ಞಾನೇಶ್ವರಿ, ಡಾ. ಜಯಕುಮಾರ್, ಸೇರಿದಂತೆ ಕುಟುಂಬಸ್ಥರೊಂದಿಗೆ ಭೇಟಿ ನೀಡಿ, ಘಾಟಿ ಸುಬ್ರಮಣ್ಯ ದೇವರ ದರ್ಶನ ಪಡೆದು ಎಲ್ಲರಿಗೂ ಶುಭ ಹಾರೈಸಿದರು .

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಮುಜರಾಯಿ ಇಲಾಖೆ ತಹಸೀಲ್ದಾರ್, ಸ್ಥಳೀಯ ಮುಖಂಡರು ಹಾಗೂ ವಕೀಲರು ಆದ ಆರ್ ವಿ ಮಹೇಶ್ (ಮನು), ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.


