
ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ಶಿಪ್-2025 ( ಅಂಜನಾದ್ರಿ ಕಪ್ -2025) ಕಾರ್ಯಕ್ರಮವನ್ನುಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್. ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಮಧುರೆ ಗ್ರಾಮ ಪಂಚಾಯಿತಿ ಸದಸ್ಯ ಕಾರ್ಯಕ್ರಮದ ಆಯೋಜನ ಆರ್.ಆನಂದ ಮೂರ್ತಿ ತಿಳಿಸಿದರು.
ನಗರದ ಖಾಸ್ ಬಾಗ್ ಸಮೀಪದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಯಕ್ರಮದ ಪೂರ್ವ ಸಿದ್ಧತೆಯಲ್ಲಿ ಭಾಗವಹಿಸಿದ್ದವರು ಮಾಧ್ಯಮಗಳಿಗೆ ಮಾತನಾಡಿದರು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್,ಧೀರಜ್ ಮುನಿರಾಜ್ ಬ್ರಿಗೇಡ್ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದ ಉದ್ಘಾಟನೆಯು ಇಂದು( ಜ. 06) ನಡೆಯಲಿದ್ದು ವೇದಿಕೆಯನ್ನು ರಾಜ್ಯದ ಹಲವು ಗಣ್ಯರು ಹಂಚಿಕೊಳ್ಳುತ್ತಿದ್ದಾರೆ ಎಂದರು .
ಈ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯು ನಿರಂತರ ಮೂರು ದಿನಗಳು ನಡೆಯಲಿದ್ದು , ಪಂದ್ಯಾವಳಿಯಲ್ಲಿ ರಾಜ್ಯದ 26 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದರು .
ಪಂದ್ಯಾವಳಿಗಳಿಗೆ ಆಗಮಿಸುವ ಕ್ರೀಡಾಪಟುಗಳಿಗೆ ವಸತಿ ಊಟ ಸೇರಿದಂತೆ ಉತ್ತಮ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ರಾಷ್ಟ್ರಮಟ್ಟಕ್ಕೆ ನೇರ ಆಯ್ಕೆ
ಈ ಪಂದ್ಯಾವಳಿಯ ಮತ್ತೊಂದು ವಿಶೇಷವೇನೆಂದರೆ ಈ ಪಂದ್ಯಾವಳಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕ್ರೀಡಾಪಟುವನ್ನು ನುರಿತ ಕ್ರೀಡಾ ತರಬೇತಿದಾರರು ನೇರವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಿದ್ದು , ಉತ್ತಮ ಪ್ರತಿಭೆವುಳ್ಳ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ತಮ್ಮ ಜಿಲ್ಲೆಯ ಹೆಸರನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶ ಎಂದು ಆಯೋಜಕರು ತಿಳಿಸಿದ್ದಾರೆ.
ಬಹುಮಾನಗಳ ವಿವರ
ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 1,00,111 ರೂಪಾಯಿಗಳ ನಗದು ಬಹುಮಾನ
ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 77,777. ತೃತೀಯ ಸ್ಥಾನ ಪಡೆದ ತಂಡಕ್ಕೆ 33,333 ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಕರ್ನಾಟಕ ಕಬಡ್ಡಿ ಅಸೋಸಿಯೇಷನ್ ಮಾಜಿ ಕಾರ್ಯದರ್ಶಿ ಮುನಿರಾಜು, ತಾಲ್ಲೂಕು ರೈತ ಮೂರ್ಚಾ ಅಧ್ಯಕ್ಷ ಆನಂದ್ ಮೂರ್ತಿ, ಡಿಪಿಎ ಮಾಜಿ ನಿರ್ದೇಶಕ ಎನ್.ಕೆ ರಮೇಶ್, ಹಿರಿಯ ಕಬಡ್ಡಿ ಆಟಗಾರ ಮನ್ಸೂರ್ ಪಾಷ, ಅಂತಾರಾಷ್ಟ್ರೀಯ ರೆಫರಿ ಶಮನಗೌಡ, ಖಜಾಂಚಿ ಆರ್. ಶೇಖರ್, ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಶ್ರೀನಾಥ, ಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ನಾಗರಾಜು, ನಗರಸಭಾ ಸದಸ್ಯ ವೆಂಕಟೇಶ್, ಮುಖಂಡರಾದ ಹಾಡೋನಹಳ್ಳಿ ನಾಗರಾಜು, ವಾಸು, ಸುನಿಲ್,ಮತ್ತಿತ್ತರರು ಉಪಸ್ಥಿತರಿದ್ದರು.