ದೊಡ್ಡಬಳ್ಳಾಪುರ : ದರ್ಗಾಜೋಗಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಭಾರತೀಯ ಜನತಾ ಪಾರ್ಟಿ, ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ ಮತ್ತು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಭಾಗವಹಿಸಿ ಮಾತನಾಡಿದರು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಈ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು , ಹೋಬಳಿಯ ಹಾಗೂ ಸ್ಥಳೀಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಬಿಜೆಪಿ ಕಾರ್ಯ ಕರ್ತರು ಸ್ವ ಇಚ್ಛೆಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿರುವುದು ಸಂತಸ ತಂದಿದೆ.
ಸಾವಿರಾರು ಸಂಖ್ಯೆಯಲ್ಲಿ ಕ್ಷೇತ್ರದ ಜನರು ಬಂದು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುತ್ತಿರುವುದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಮತ್ತಷ್ಟು ಸಂತಸ ತಂದಿದೆ ಎಂದರು.

ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್ ಮಾತನಾಡಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆ ಮಾಡಿರುವುದು ಸಂತಸದ ವಿಷಯವಾಗಿದ್ದು, ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ ಮತ್ತು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಗೆ ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.
ನಮ್ಮ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಂದಾಳತ್ವ ವಹಿಸಿ ಸಾಕಷ್ಟು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ , ಕಾರ್ಯಕ್ರಮದಲ್ಲಿ ಕೇವಲ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಷ್ಟೇ ಅಲ್ಲದೆ.. ತಾಲೂಕಿನ ಹಲವು ಭಾಗಗಳ ಜನರು ಭಾಗವಹಿಸಿ ಅವಕಾಶವನ್ನು ಸದುಪಯೋಗಪಡಿಸಿಕೊಂಡಿರುವುದು ಸಂತೋಷದ ವಿಷಯ , ನಮ್ಮ ಹೆಮ್ಮೆಯ ಶಾಸಕರಾದ ಧೀರಜ್ ಮುನಿರಾಜುರವರ ನೇತೃತ್ವದಲ್ಲಿ ಈ ರೀತಿಯ ಸಮಾಜಮುಖಿ ಕಾರ್ಯಗಳು ಮತ್ತಷ್ಟು ನಡೆಯಲಿ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ನಗರ ಮಂಡಲ ಅಧ್ಯಕ್ಷ ನಾಗೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಜೆ ವೈ ಮಲ್ಲಣ್ಣ , ಸುರೇಶ್, ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣಯ್ಯ, ಸ್ಥಳೀಯ ಮುಖಂಡರಾದ ನಾಗರಾಜು, ಮಂಜುನಾಥ್, ಚಂದ್ರು, ಪರಮೇಶ್ವರಯ್ಯ, ಮನೋಜ್, ಗುರು, ಸುನಿಲ್, ವಿಜಿಕುಮಾರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
