
ಬೆಂಗಳೂರು ಗ್ರಾಮಾಂತರ , ಜನವರಿ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ಹಾಗೂ ವಚನಕಾರ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನ, ಸಿಬ್ಬಂದಿ ಉಪಸ್ಥಿತರಿದ್ದರು.